ವಿರಾಜಪೇಟೆ: ಮಾರ್ಚ್, 04 ರಿಂದ 10 ರವರೆಗೆ ವಿರಾಜಪೇಟೆಯ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು (NSS Camp) ವಿರಾಜಪೇಟೆ ತಾಲ್ಲೂಕು ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಮಾರ್ಚ್, 04 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೇಟೋಳಿ ಗ್ರಾ.ಪಂ. ಅಧ್ಯಕ್ಷರಾದ ಅಚ್ಚಪಂಡ ಎಂ.ಬೋಪಣ್ಣ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ಹೆಗ್ಗಳ ಸ.ಹಿ.ಪ್ರಾ.ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ.ಆರ್. ಇತರರು ಪಾಲ್ಗೊಳ್ಳಲಿದ್ದಾರೆ.