ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಿದ ‘ಲಿಟಲ್ ಸ್ಕಾಲರ್ಸ್ ಅಕಾಡೆಮಿ’

Share this post :

ವಿರಾಜಪೇಟೆಯ ಮಗ್ಗುಲ ಗ್ರಾಮದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು, ತನ್ನ ನೂತನ ‘ಎಲ್ ಎಸ್ ಎ ಕೇರ್’ ಘಟಕದ ‘ಪೀಪಲ್ ಹೌಸ್’ ವಿದ್ಯಾರ್ಥಿ ತಂಡದ ಸಹಯೋಗದೊಂದಿಗೆ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಿತು. ಸಂಸ್ಥೆಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅವರು ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶುಭ ಹಾರೈಸಿದರು. ಅಲ್ಲದೆ, ಸಂಸ್ಥೆಯ ಮೂಲಕ ಇನ್ಮುಂದೆ ಪ್ರತಿ ತಿಂಗಳೂ ಇಂತಹ ವೈವಿಧ್ಯಮಯ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿರಾಜಪೇಟೆ ಮತ್ತು ಕಲ್ತೋಡು ಸಿ ಆರ್ ಪಿ ಸೈಫುನ್ನಿಸ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಿಕೊಡುವ ಮೂಲಕ ಸರ್ಕಾರಿ ಶಾಲೆಯ ಮಕ್ಕಳಿಗೆ ಶಿಕ್ಷಣ ಹಾಗೂ ಶಾಲೆಯ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಹೆಗ್ಗಳ ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ, ಸಹ ಶಿಕ್ಷಕಿ ಕಮರುನ್ನಿಸ, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಎರಡೂ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

coorg buzz
coorg buzz