ಮಡಿಕೇರಿ: ದಸರಾ ಹಬ್ಬದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಅಕ್ಟೋಬರ್ 08 (ಮಂಗಳವಾರ) ರಂದು ಮಡಿಕೇರಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ಹೀಗಾಗಿ, ಅಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ವಿದ್ಯುತ್ ಕಡಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಚೆಸ್ಕಾಂ (CESC) ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಜಯನಗರ, ಅಶೋಕ್ಪುರ
ಜಲಾಶ್ರಯ ಬಡಾವಣೆ, ಸರ್ಕಾರಿ ಆಸ್ಪತ್ರೆ, ಮಂಗಳಾದೇವಿ ನಗರ
ಅರಣ್ಯ ಭವನ, ಚೈನ್ಗೇಟ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣ
ಇಂಡಸ್ಟ್ರಿಯಲ್ ಏರಿಯಾ, ಕಾವೇರಿ ಹಾಲ್, ಪೆನ್ಷನ್ ಲೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.



