Karnataka Budget 2025: ಸಿದ್ದರಾಮಯ್ಯ ಬಜೆಟ್ ಪ್ರಮುಖಾಂಶಗಳು

Karnataka Budget 2025

Share this post :

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget)  ಮಂಡನೆ ಪೂರ್ಣಗೊಂಡಿದೆ. ಬರೋಬ್ಬರಿ 3 ಗಂಟೆ 30 ನಿಮಿಷ ಬಜೆಟ್ ಭಾಷಣ ಮಾಡಿದ್ದು, 178 ಪುಟಗಳ ಯೋಜನೆಗಳನ್ನು ಓದಿದ್ದಾರೆ. ದಾಖಲೆಯ 16 ನೇ ಬಾರಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಈ ಬಜೆಟ್ ಯಾರಿಗೆ ಸಿಹಿಯಾಗಿತ್ತು, ಯಾರಿಗೆ ಕಹಿ, ಯಾವ ವಲಯಕ್ಕೆ ಎಷ್ಟು ಅನುದಾನ, ಹೊಸ ಕೊಡುಗೆಗಳು ಏನು ಎನ್ನುವುದನ್ನು ಇಲ್ಲಿ ತಿಳಿಯೋಣ.

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ. ಕಳೆದ ವರ್ಷ 3.71 ಲಕ್ಷ ಕೋಟಿ ರೂ. ಬಜೆಟ್ ಗಾತ್ರವಿತ್ತು. ಈ ಬಾರಿ ಈ ಅಂಕಿ 4 ಲಕ್ಷ ಕೋಟಿ ರೂ. ದಾಟಿದೆ.
ಈ ಬಾರಿ 38,000 ಕೋಟಿ ರೂನಷ್ಟು ಹೆಚ್ಚುವರಿ ಆದಾಯವನ್ನು ರಾಜ್ಯಕ್ಕೆ ತಂದಿದ್ದಾರೆ.

Karnataka Budget 2025

ಶಿಕ್ಷಣ
* ಶಾಲಾ ಮಕ್ಕಳಿಗೆ ವಾರದ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ ಮಾಡಲು ಘೋಷಣೆ ಮಾಡಲಾಗಿದೆ. ಇದಕ್ಕಾಗಿ 1,500 ಕೋಟಿ ರೂ. ಮೀಸಲಿಡಲಾಗುತ್ತದೆ
* ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ಕೇಂದ್ರ ವಿಶ್ವವಿದ್ಯಾಲಯವೆಂದು ಮರುನಾಮಕರಣ.
* ಎಡಿಬಿ ನೆರವಿನಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾರಂಭಿಸಲು ಕ್ರಮ.
* ಬಿಸಿಯೂಟ ತಯಾರಿಕೆ ಸಿಬ್ಬಂದಿ ಗೌರವಧನ 1ಸಾವಿರ ರೂ. ಹೆಚ್ಚಳ.
* ಚಿಂತಾಮಣಿ ತಾಲ್ಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ.
* ಸರ್ಕಾರಿ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2000 ರೂಪಾಯಿ ಹೆಚ್ಚಿಸಲಾಗುವುದು.

ಕೃಷಿ
* ರೇಷ್ಮೆ ಅಭಿವೃದ್ಧಿ ಯೋಜನೆಗೆ 55 ಕೋಟಿ ರೂ. ಅನುದಾನ
* 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಣೆ ಗುರಿ.
* ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
* ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ
* 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
* ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ 250 ಕೋಟಿ ರೂ.
* “ಅನುಗ್ರಹ” ಯೋಜನೆಯಡಿ ಪರಿಹಾರ ಮೊತ್ತ ಹೆಚ್ಚಳ: ಹಸು, ಎಮ್ಮೆ ಮತ್ತು ಎತ್ತುಗಳಿಗೆ 15 ಸಾವಿರ ರೂ., ಕುರಿ/ ಮೇಕೆಗಳಿಗೆ 7500 ರೂ., ಕುರಿ/ ಮೇಕೆ ಮರಿಗಳಿಗೆ 5 ಸಾವಿರ ರೂ. ಗಳಿಗೆ ಹೆಚ್ಚಳ.
* ರಾಜ್ಯದಲ್ಲಿ ಹೊಸ ಮೀನುಗಾರಿಕಾ ನೀತಿ ಜಾರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ
* ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣ
ಪುತ್ತೂರು ತಾಲ್ಲೂಕು ಆಸ್ಪತ್ರೆ ಉನ್ನತೀಕರಣ; ಮೊಳಕಾಲ್ಮೂರು ಮತ್ತು ವಿರಾಜಪೇಟೆಯಲ್ಲಿ 200 ಹಾಗೂ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆ,

ಅಲ್ಪಸಂಖ್ಯಾತರ ಕಲ್ಯಾಣ
* ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ.
* ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್‌ ಪಬ್ಲಿಕ್‌ ಶಾಲೆಗಳನ್ನಾಗಿ ಉನ್ನತೀಕರಿಸಲು 100 ಕೋಟಿ ರೂ.
* ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಗಾಗಿ 1 ಸಾವಿರ ಕೋಟಿ ರೂ. ಅನುದಾನ.
* ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ
* ಅಲ್ಪಸಂಖ್ಯಾತ ಮಹಿಳೆಯರಿಗಾಗಿ 16 ಹೊಸ ಮಹಿಳಾ ಕಾಲೇಜುಗಳ ಸ್ಥಾಪನೆ.
* ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ
* ಕ್ರಿಶ್ಚಿಯನ್‌ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಅನುದಾನ.
* ಜೈನ ಅರ್ಚಕರು, ಸಿಖ್ಖ್‌ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್‌ಗಳ ಮಾಸಿಕ ಗೌರವಧನ 6 ಸಾವಿರ ರೂ. ಗಳಿಗೆ ಹೆಚ್ಚಳ.

ವಾಣಿಜ್ಯ ತೆರಿಗೆ ಇಲಾಖೆ
ಫೆಬ್ರವರಿ ಮಾಹೆಯ ವೃತ್ತಿ ತೆರಿಗೆ 200 ರೂ. ಗಳಿಂದ 300 ರೂ. ಗಳಿಗೆ ಹೆಚ್ಚಳ.
2025-26 ರಲ್ಲಿ 1,20,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ

ನೋಂದಣಿ ಮತ್ತು ಮುದ್ರಾಂಕ
2025-26 ರಲ್ಲಿ 28,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ

ಅಬಕಾರಿ
2025-26 ರಲ್ಲಿ 40,000 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ

ಮೋಟಾರು ವಾಹನ
2025-26 ನೇ ಸಾಲಿಗೆ 15000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ

ಗಣಿ ಮತ್ತು ಭೂ ವಿಜ್ಞಾನ
2025-26 ನೇ ಸಾಲಿಗೆ 9000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ

ಇತರೆ ಪ್ರಮುಖಾಂಶಗಳು
* ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳ ಸ್ಥಾಪನೆಗೆ 750 ಕೋಟಿ ರೂ. ವೆಚ್ಚ
* ರಾಜ್ಯದ 10 ನಗರಗಳಲ್ಲಿ ಪ್ರಾಯೋಗಿಕವಾಗಿ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆ
* 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ ಕಾರಿಡಾರ್‌ ನಿರ್ಮಾಣಕ್ಕೆ ಸರ್ಕಾರದಿಂದ ಬಿ.ಬಿ.ಎಂ.ಪಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ ಒದಗಿಸಲಾಗುವುದು.
* ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್‌-ಡೆಕ್ಕರ್‌ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
* “ಬ್ರ್ಯಾಂಡ್ ಬೆಂಗಳೂರು” ಯೋಜನೆಯಡಿ, 1,800 ಕೋಟಿ ರೂ. ಮೊತ್ತದ ೨೧ ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.
* ಬೆಂಗಳೂರು ಬಿಸ್‌ನೆಸ್‌ ಕಾರಿಡಾರ್‌ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ. ಯೋಜನೆ.
* ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ.
* ರಾಯಚೂರು, ಬೀದರ್‌ ಮತ್ತು ಹಾಸನ ನಗರಸಭೆಗಳು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ. ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆ.
* ವಿಜಯಪುರ ವಿಮಾನ ನಿಲ್ದಾಣ 2025-26 ಕಾರ್ಯಾರಂಭ.
* ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 319 ಕೋಟಿ ರೂ. ಅನುದಾನ ಬಿಡುಗಡೆ.
* ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣಕ್ಕೆ 406 ಕೋಟಿ ರೂ. ಅನುದಾನ.
* ಬೆಂಗಳೂರು ಉಪನಗರ ರೈಲ್ವೆ ಯೋಜನೆ 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
* ದೇವನಹಳ್ಳಿಯಲ್ಲಿ 407 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್‌ ಅಭಿವೃದ್ಧಿ.
* ದಕ್ಷಿಣ ಕನ್ನಡ, ವಿಜಯಪುರ, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಟ್ಟು 6 ಸೇತುವೆ ನಿರ್ಮಾಣಕ್ಕೆ ಅನುಮೋದನೆ.
* “ಗೃಹ ಜ್ಯೋತಿ” ಯಡಿ ಇದುವರೆಗೆ 9657 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ 10,100 ಕೋಟಿ ರೂ. ಬಿಡುಗಡೆಗೆ ಕ್ರಮ.
* ಸೋಲಾರ್‌ ಪಂಪ್‌ ಸೆಟ್‌ ಅಳವಡಿಸುವ ಯೋಜನೆಯಡಿ 40ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ, 752 ಕೋಟಿ ರೂ. ವೆಚ್ಚ.
* 8,833 ಕೋಟಿ ರೂ. ವೆಚ್ಚದಲ್ಲಿ 100 ಉಪಕೇಂದ್ರ ಸ್ಥಾಪನೆ.
* ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್‌ ಕಾರಿಡಾರ್‌ ಯೋಜನೆಯಡಿ ತುಮಕೂರು ಕೈಗಾರಿಕಾ ನೋಡ್‌ನಲ್ಲಿ ಜಪಾನೀಸ್‌ ಇಂಡಸ್ಟ್ರಿಯಲ್‌ ಪಾರ್ಕ್‌ ಸ್ಥಾಪನೆ.
* 90,645 ನೇಕಾರರಿಗೆ ಉಚಿತ ವಿದ್ಯುತ್‌ ಹಾಗೂ ರಿಯಾಯಿತಿ ವಿದ್ಯುತ್‌ ಸವಲತ್ತನ್ನು ಒದಗಿಸಲು 100 ಕೋಟಿ ರೂ. ಅನುದಾನ
* 7 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾನ.
*ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್‌, ಖೋಖೋ ಅಕಾಡೆಮಿ ಸ್ಥಾಪನೆಗೆ 2 ಕೋಟಿ ರೂ.
* ವಿವಿಧ ಕಾರ್ಯಕ್ರಮದಡಿ ಅರಣ್ಯ ಪ್ರದೇಶದಲ್ಲಿ 28,494 ಹೆಕ್ಟೇರ್‌ನಲ್ಲಿ 213 ಲಕ್ಷ ಸಸಿಗಳನ್ನು ಹಾಗೂ ಅರಣ್ಯೇತರ ಪ್ರದೇಶದಲ್ಲಿ 1,200 ಹೆಕ್ಟೇರ್‌ನಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಿ ನೆಡುತೋಪುಗಳ ನಿರ್ವಹಣೆಗೆ ಕ್ರಮ.
* ಹೊಸ ಭೂ-ಕಂದಾಯ ಕಾಯ್ದೆ ಜಾರಿಗೆ ಕ್ರಮ.
* ಬಿಬಿಎಂಪಿ ವ್ಯಾಪ್ತಿಯಲ್ಲಿ 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ನಿರ್ವಹಣಾ ವ್ಯವಸ್ಥೆ.
* ಅರ್ಚಕರ ವಾರ್ಷಿಕ ತಸ್ತೀಕ್‌ ಮೊತ್ತ 72 ಸಾವಿರ ರೂ.ಗಳಿಗೆ ಹೆಚ್ಚಳ.
* ಪತ್ರಕರ್ತರ ಮಾಸಾಶನ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ.
* ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ.
* ಎಲ್ಲಾ ವಿಧದ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ಮಿತಿಗೊಳಿಸಲು ಕ್ರಮ
* ಬೆಂಗಳೂರು ಸೇಫ್ ಸಿಟಿ ಯೋಜನೆ 667 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
* ʻಶಕ್ತಿʼ ಯೋಜನೆಯಡಿ ಪ್ರಸಕ್ತ ವರ್ಷ ಯೋಜನೆಗೆ ಈ ಸಾಲಿನಲ್ಲಿ 5,300 ಕೋಟಿ ರೂ. ಅನುದಾನ.
* ಒಟ್ಟಾರೆ 14,750 ಸಾವಿರ ಹೊಸ ವಿದ್ಯುತ್‌ ಚಾಲಿತ ಬಸ್ಸುಗಳ ಸೇರ್ಪಡೆಗೆ ಕ್ರಮ.
* ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಹೊಸ ಸ್ಯಾಟಲೈಟ್‌ ಬಸ್‌ ನಿಲ್ದಾಣ ನಿರ್ಮಾಣ.
* ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಗೌರವಧನ 750 ರೂ. ಹೆಚ್ಚಳ.