ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯು ಸಮಾಜ ಸೇವೆಯಲ್ಲಿ ಉತ್ತಮ ಸೇವೆ ಮಾಡಿರುವವರಿಗೆ ಕೊಡಮಾಡುತ್ತಿರುವ ರಾಜ್ಯ ಪ್ರಶಸ್ತಿಗೆ ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯೆ ಹಾಗೂ ಕೊಡಗು (Kodagu) ಜಿಲ್ಲಾ ಹಾಪ್ ಕಾಮ್ಸ್ ನ ನಿರ್ದೇಶಕಿ ಸುಂಟಿಕೊಪ್ಪದ ಚಟ್ರಂಡ ಲೀಲಾ ಮೇದಪ್ಪ (Leela Medappa) ಅವರು ಭಾಜನರಾಗಿದ್ದಾರೆ.
ಮಹಿಳಾ ದಿನಾಚರಣೆ ಪ್ರಯುಕ್ತ ಶಿಕಾರಿಪುರದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ಆಯೋಜಿಸಿರುವ ತೋಟಗಾರಿಕೆ ಮತ್ತು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ
ಲೀಲಾ ಮೇದಪ್ಪ ಅವರು ಸನ್ಮಾನ ಹಾಗೂ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.