ಕೇಂದ್ರ ಸಾಂಸ್ಕೃತಿಕ ಮಂತ್ರಾಲಯದ ಸಹಯೋಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಮಾರ್ಚ್ 7 ರಿಂದ 12ರವರೆಗೆ ನವದೆಹಲಿಯಲ್ಲಿ ಆಯೋಜಿಸಿರುವ ಸಾಹಿತ್ಯ ರಂಗದಲ್ಲೇ ಪ್ರತಿಷ್ಠಿತ ಕಾರ್ಯಕ್ರಮವಾದ ಏಷ್ಯಾದ ಅತಿದೊಡ್ಡ ಸಾಹಿತ್ಯೋತ್ಸವಕ್ಕೆ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಮುಲ್ಲೇಂಗಡ ರೇವತಿ ಪೂವಯ್ಯ (Revathi Poovaiah) ಆಯ್ಕೆಯಾಗಿದ್ದಾರೆ.
ಏಷ್ಯಾದ ಬೃಹತ್ ಸಾಹಿತ್ಯೋತ್ಸವ ಖ್ಯಾತಿಯ ಈ ಕಾರ್ಯಕ್ರಮದಲ್ಲಿ ಆಹ್ವಾನಿತ ಕೊಡವ ಭಾಷಾ ಕವಯಿತ್ರಿಯಾಗಿ ಕೊಡಗನ್ನು ಇವರು ಪ್ರತಿನಿಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ನಾನಾ ಸಾಂಸ್ಕೃತಿಕ ವಲಯಗಳ ಅನಾವರಣವಾಗುತ್ತದೆ. ಹಲವು ದಿಗ್ಗಜ ಹಿರಿಯ ಸಾಹಿತಿಗಳು ಕೂಡ ಪಾಲ್ಗೊಳ್ಳುತ್ತಿದ್ದಾರೆ.