ಭಾರತೀಯ ಸೇನೆಯಲ್ಲಿ ಅಗ್ನಿಪಥ (Agni path) ಯೋಜನೆಯ ಅಗ್ನಿವೀರರಾಗಲು (Agniveer) ಸುವರ್ಣ ಅವಕಾಶವಿದೆ. ಭಾರತೀಯ ರಕ್ಷಣಾ ಪಡೆಗಳಲ್ಲಿ ಅಗ್ನಿವೀರರನ್ನು ಆಯ್ಕೆ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
ಭಾರತೀಯ ಸೇನೆಯು ಅಗ್ನಿವೀರ್ ಜನರಲ್ ಡ್ಯೂಟಿ (ಜಿಡಿ), ಟೆಕ್ನೀಷಿಯನ್, ಕ್ಲರ್ಕ್ ಮತ್ತು ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್‌ಮನ್, ಸೋಲ್ಜರ್ ಫಾರ್ಮಾ, ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ ಮತ್ತು ಮಹಿಳಾ ಪೊಲೀಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ ಭೇಟಿ ನೀಡಿ.
ಎರಡು ಹುದ್ದೆಗಳಿಗೆ ಅರ್ಜಿ: ಈ ಬಾರಿ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು ಅಭ್ಯರ್ಥಿಗಳು ಒಂದೇ ಅರ್ಜಿ ನಮೂನೆಯಲ್ಲಿ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ರೂ.250 ನಲ್ಲಿ ಇರಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.
ಯಾರು ಅರ್ಜಿ ಸಲ್ಲಿಸಬಹುದು?: ಯಾವುದೇ 10ನೇ ತರಗತಿ ಪಾಸ್ ಆದ ಅಭ್ಯರ್ಥಿ ಅಗ್ನಿವೀರ್ ಸೇರಲು ಅರ್ಜಿ ಹಾಕಬಹುದು. 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅಗ್ನಿವೀರ್ಗೆ ಅರ್ಜಿ ಸಲ್ಲಿಸಬಹುದು. ಅಗ್ನಿವೀರ್ ನೇಮಕಾತಿಗೆ ಅರ್ಜಿ ಸಲ್ಲಿಸುವಾಗ, ಅಭ್ಯರ್ಥಿಗಳು ತಮ್ಮ 10 ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸಬೇಕು. ಅಂಕಪಟ್ಟಿಯಲ್ಲಿ ಉಲ್ಲೇಖಿಸಲಾದ ಅದೇ ಹೆಸರನ್ನು ಅರ್ಜಿಯಲ್ಲಿ ಭರ್ತಿ ಮಾಡಿ. ಅರ್ಜಿ ಸಲ್ಲಿಸುವ ಸಮಯದಲ್ಲಿ ನಿವಾಸ ಪ್ರಮಾಣಪತ್ರವನ್ನು ಸಹ ಸಲ್ಲಿಸಬೇಕಾಗುತ್ತದೆ. ಅರ್ಜಿ ಶುಲ್ಕ ರೂ.250 ನಿಗದಿಪಡಿಸಲಾಗಿದೆ.
ಅಗ್ನಿವೀರರ ಹುದ್ದೆಗೆ ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.
ಹೆಚ್ಚಿನ ಮಾಹಿತಿಗಾಗಿ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡಿ. ಅರ್ಜಿ ಭರ್ತಿ ಮಾಡುವಾಗ, ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಸರಿಯಾಗಿ ನಮೂದಿಸಿ.