ವಿರಾಜಪೇಟೆ 66/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಿದ್ದಾಪುರ, ಗುಹ್ಯ, ಮಾಲ್ದಾರೆ, ಕರಡಿಗೋಡು, ಇಂಜಲಗೆರೆ, ಮೇಕೂರು, ಮೂರ್ನಾಡು, ಪಾರಣೆ, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
