ಮಾರ್ಚ್‌ 22ಕ್ಕೆ ಕರ್ನಾಟಕ ಬಂದ್‌ ಫಿಕ್ಸ್‌ – ಕನ್ನಡ ಪರ ಹೋರಾಟಗಾರರ ಸಭೆಯಲ್ಲಿ ಆದ ತೀರ್ಮಾನವೇನು ಗೊತ್ತಾ..?

Share this post :

ಬೆಂಗಳೂರು : ಎಂಇಎಸ್(mes) ಮತ್ತು ಶಿವಸೇನೆಯನ್ನ(Shivasena) ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ನಿಶ್ಚಿತ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ಬಂದ್ ಸಂಬಂಧ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್(Vatal Nagaraj) ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್​ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ಮಾಡಲಾಗುತ್ತದೆ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದು ತಿಳಿಸಿದರು.
ಮಾರ್ಚ್ 22ರಂದು ಯಾರು ಮೆಟ್ರೋ ಹತ್ತಬೇಡಿ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತಾನಾಡಿದ್ದೇವೆ. ಅಂದು ಬಸ್ ಓಡಿಸಬಾರದೆಂದು ಹೇಳಿದ್ದೇವೆ. ಬೆಳಗಾವಿಯಿಂದ ಎಂಇಎಸ್ ಅನ್ನು ಒದ್ದು ಓಡಿಸಬೇಕೋ ಬೇಡ್ವೋ? ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದ್ರೆ ನಮ್ ಕಣ್ಣಿಗೆ ಇದು ಬೆಟ್ಟ ಎಂದರು. ಕರ್ನಾಟಕ ಬಂದ್​ಗೆ ಸಾರಿಗೆ ನೌಕರರ ಕೂಟ ಸಹ ಬೆಂಬಲಿಸಿದೆ ಎಂದರು.
ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್​ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್​​ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.

coorg buzz
coorg buzz