ಯುಗಾದಿ, ರಂಜಾನ್ ಹಬ್ಬಕ್ಕೆ KSRTC 2 ಸಾವಿರ ವಿಶೇಷ ಬಸ್‌: ಮುಂಗಡ ಬುಕ್ಕಿಂಗ್‌ಗೆ ಡಿಸ್ಕೌಂಟ್‌

KSRTC bus

Share this post :

ಮಾರ್ಚ್‌ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್‌ 31 ರಂದು ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ (KSRTC) ವತಿಯಿಂದ 2000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದೆ. ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ ” ಎಂದು ತಿಳಿಸಿದೆ.

ಮೆಜೆಸ್ಟಿಕ್‌ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ವಿಶೇಷ ಬಸ್‌ ಸಂಚರಿಸಲಿವೆ.

ಸ್ಯಾಟಲೈಟ್‌ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿವೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

ಮುಂಗಡ ಬುಕ್ಕಿಂಗ್‌ಗೆ ರಿಯಾಯಿತಿ
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಸೀಟ್ ಅನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದಾಗ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಬುಕ್ಕಿಂಗ್‌ ಹೇಗೆ?
ಇ – ಟಿಕೆಟ್‌ ಬುಕಿಂಗ್‌ ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಸೀಟುಗಳನ್ನು ಕಾಯ್ದಿರಿಸಬಹುದಾಗಿದೆ. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಸೀಟುಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

coorg buzz
coorg buzz