ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

Students

Share this post :

2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ’ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ, 31 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.

coorg buzz
coorg buzz