ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿದೆ. ಈ ಘಟನೆ ರಾಜ್ಯ ರಾಜಕಾರಣದಲ್ಲಿ ತಿರುವು ಪಡೆದುಕೊಂಡು ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ವಾಟ್ಸಪ್ ಪೋಸ್ಟ್ ಮಾಡಿ ಬಳಿಕ ಬೆಂಗಳೂರಿನ ನಾಗವಾರದ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಬಿಜೆಪಿ ಕಾರ್ಯಕರ್ತವಿನಯ್ ಸೋಮಯ್ಯ ಮನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ರವರು , ಶ್ರೀ ಭಾರತೀಶ್,ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಇನ್ನು ಇಂದು ಬೆಳಗ್ಗೆ ಪ್ರತಿಪಕ್ಷ ನಾಯಕ ಆರ್ ಆಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿ ಅವರು ಬೆಂಗಳೂರಿನ ಡಾ. ಬಿ. ಆರ್. ಅಂಬೇಡ್ಕರ್ ಆಸ್ಪತ್ರೆಯಲ್ಲಿ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ವಿನಯ್ ಸೋಮಯ್ಯ ಬೆಂಗಳೂರಿನ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಬಿಜೆಪಿ ಕಾರ್ಯಕರ್ತರಾಗಿದ್ದ ವಿನಯ್ ಇಂದು ಬೆಳಗ್ಗೆ 4.30ಕ್ಕೆ ಸಾವಿಗೆ ಶರಣಾಗಿದ್ದಾರೆ. ಸಾಯುವುದಕ್ಕೂ ಮೊದಲು ವಿನಯ್ ಬರೆದಿದ್ದಾರೆ ಎನ್ನಲಾಗುತ್ತಿರುವ ಡೆತ್ನೋಟ್ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಕುಶಾಲನಗರ ತಾಲೂಕಿನ ಗೋಣಿಮಾರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡುಂಡಿ ಗ್ರಾಮದವರಾಗಿದ್ದು, ದೇವತಿ ಹಾಗೂ ಸೋಮಯ್ಯ ದಂಪತಿಯ 3ನೇ ಪುತ್ರ. ವಿನಯ್ ಸೋಮಯ್ಯ ಈಗಾಗಲೇ ಮದುವೆಯಾಗಿದ್ದು, ಓರ್ವ ಮಗಳು ಇದ್ದಾಳೆ. ಬೆಂಗಳೂರಿನಲ್ಲಿ ಮ್ಯಾನ್ಪವರ್ ಆಪರೇಟಿಂಗ್ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.