ನಾಪೋಕ್ಲು : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಬಲ್ಲಮಾವಟಿ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಾಕಿ ತರಬೇತಿ ಉಚಿತ ಶಿಬಿರ ಸಂಪನ್ನಗೊಂಡಿತು.
ಶಿಬಿರದ ಸಮಾರೋಪ ಸಮಾರಂಭ ಹಿರಿಯರ ಸಮ್ಮುಖದಲ್ಲಿ ಜರುಗಿತು. ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ, ಅಪ್ಪಚೆಟ್ಟೋಳಂಡ ರವಿ ಮೊಣ್ಣಪ್ಪ, ಕೈಬಿಲಿರ ಟಿಪ್ಪು ಚಂಗಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಪೂಣಚ್ಚ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಉಚಿತ ಟಿ ಶರ್ಟ್ ವಿತರಿಸಲಾಯಿತು. ಶಿಬಿರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಿರಂತರವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರಮುಖರು ಕರೆ ನೀಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಕೈಬಿಲಿರ ಉತ್ತಪ್ಪ, ಖಜಾಂಚಿ ಚೀಯಂಡಿರ ದಿನೇಶ್, ಸಹ ಕಾರ್ಯದರ್ಶಿ ಮಚ್ಚುರ ಯದುಕುಮಾರ್, ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ನುಚ್ಚುಮಣಿಯಂಡ ರಶಿತ ಪ್ರಾರ್ಥಿಸಿದರು. ಕ್ಲಬ್ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಸ್ವಾಗತಿಸಿದರು. ಕಾರ್ಯದರ್ಶಿ ಚಂಗೇಟಿರ ಸೋಮಣ್ಣ ನಿರೂಪಿಸಿದರು.