ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ – ಸವಾರ ದುರ್ಮರಣ..!

Share this post :

ಸುಂಟಿಕೊಪ್ಪ : ವಿದ್ಯುಕ್‌ ಕಂಬಕ್ಕೆ ಬೈಕ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಸುಂಟಿಕೊಪ್ಪ ಬಳಿಯ ಕೆಂಚೆಟ್ಟಿ ಎಂಬಲ್ಲಿ ಸಂಭವಿಸಿದೆ.
ಮಾದಾಪುರ ಜಂಬೂರು ನಿವಾಸಿ ಅನೀಲ್(39)‌ ಮೃತ ದುರ್ದೈವಿ. ಸ್ನೇಹಿತ ಹರೀಶ್‌ ಎಂಬವರೊಂದಿಗೆ ಬೈಕ್‌ನಲ್ಲಿ ಸುಂಟಿಕೊಪ್ಪದಿಂದ ಮಾದಾಪುರ ಕಡೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

coorg buzz
coorg buzz