ಬೆಂಗಳೂರು : ಸಿ ಅಂಡ್ ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲಾಗುವುದೆಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಇಂದು ತಮ್ಮನ್ನು ಭೇಟಿಯಾದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನೊಳಗೊಂಡ ನಿಯೋಗದ ಜೊತೆ ಚರ್ಚಿಸಿದ ಬಳಿಕ ಅವರು ಪ್ರತಿಕ್ರಿಯಿಸಿದರು.
ಸಿ ಅಂಡ್ ಡಿ ಜಾಗದ ವಿಚಾರವಾಗಿ ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ ನಿಯೋಗ ಸಚಿವರ ಗಮನಸೆಳೆಯಿತು. ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, ಈ ಬಗ್ಗೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಿತಿ ರಚಿಸಲಾಗುವುದೆಂದು ಭರವಸೆ ನೀಡಿದರು.



