ವೀರಾಜಪೇಟೆ : ಶಾಸಕರ ನಿಧಿಯಿಂದ ವಿಶೇಷ ಚೇತನರಿಗೆ ನೀಡಲಾಗುವ ನಾಲ್ಕು ಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಇಂದು ವಿತರಿಸಲಾಯಿತು.
ವಿರಾಜಪೇಟೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿತರಿಸಿದರು. ಸಮಾಜದಲ್ಲಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ಈ ಸೌಲಭ್ಯ ಒದಗಿಸಲಾಗುತ್ತಿದೆ. ವಿಶೇಷ ಚೇತನರು ತಮ್ಮಲ್ಲಿನ ಸಮಸ್ಯೆಯನ್ನು ಮರೆತು ಸಮಾಜದಲ್ಲಿ ತಮ್ಮ ಕೈಲಾದ ಸಾಧನೆ ಮಾಡಲು ಪ್ರಯತ್ನಿಸಬೇಕೆಂದು ಹೇಳಿದರು.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪುರಸಭೆ ಸದಸ್ಯರಾದ ರಜಿನಿಕಾಂತ್, ರಾಫಿ, ಪ್ರಮುಖರಾದ ಜೋಕಿಮ್, ಕುಂದಚೀರ ಮಂಜು ದೇವಯ್ಯ, ಶಬೀರ್, ಮಂಜುನಾಥ್, ಮಹದೇವ ಮುಂತಾದವರಿದ್ದರು.



