ಮಡಿಕೇರಿ : ನಗರದಲ್ಲಿರುವ ಬೋಧಕ ಆಸ್ಪತ್ರೆಗೆ(ಜಿಲ್ಲಾಸ್ಪತ್ರೆ) ಹೆಚ್ಚುವರಿ ಕಟ್ಟಡ ಕಾಮಗಾರಿಗೆ ನಾಳೆ ಶಿಲಾನ್ಯಾಸ ನಡೆಯಲಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
41 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಉಳಿಕೆ ಮತ್ತು ಹೆಚ್ಚುವರಿ(ಎರಡನೇ ಹಂತ) ಕಾಮಗಾರಿ ಆರಂಭಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಸನ್ಮಾನ್ಯ ಡಾ. ಶರಣಪ್ರಕಾಶ ಪಾಟೀಲ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅವರು ಈ ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಿ ಅನುದಾನ ಒದಗಿಸಿದ್ದಾರೆಂದು ಶಾಸಕ ಮಂತರ್ ಗೌಡ ಹೇಳಿದ್ದಾರೆ.



