ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ (ICC Champions Trophy) ರೋಚಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿ ಗುಂಪಿನ ಪಂದ್ಯದಲ್ಲಿ ಬುಧವಾರ ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಕಾದಾಟ ನಡೆಸಿವೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಬ್ಯಾಟರ್ ಇಬ್ರಾಹಿಂ ಜದ್ರಾನ್ ( Ibrahim Zadran) ಅವರ ಸ್ಫೋಟಕ ಬ್ಯಾಟಿಂಗ್ ನಡೆಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಜದ್ರಾನ್ 146 ಎಸೆತಗಳಲ್ಲಿ 12 ಬೌಂಡರಿ, 6 ಸಿಕ್ಸರ್ಗಳ ನೆರವಿನಿಂದ 177 ರನ್ಗಳಿಸಿದರು. ಈ 177 ರನ್ಗಳ ನೆರನಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಹೊಡೆದ ಬ್ಯಾಟ್ಸ್ಮನ್ ಎಂಬ ವಿಶ್ವದಾಖಲೆಗೆ ಪಾತ್ರವಾಗಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ವೈಕ್ತಿಕಕ ರನ್ ಹೊಡೆದ ವಿಶ್ವದಾಖಲೆ ಇಂಗ್ಲೆಂಡ್ ಬ್ಯಾಟ್ಸ್ಮನ್ ಬೆನ್ ಡಕೆಟ್ ಹೆಸರಿನಲ್ಲಿತ್ತು. ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ ಇದೇ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 143 ಎಸೆತಗಳಲ್ಲಿ 17 ಬೌಂಡರಿ, 3 ಸಿಕ್ಸರ್ಗಳ ಸಹಿತ 165 ರನ್ಗಳಿಸಿದ್ದರು. ಇದೀಗ ಈ ದಾಖಲೆಯನ್ನು ಇಬ್ರಾಹಿಂ ಜದ್ರಾನ್ ಅವರು ಬ್ರೇಕ್ ಮಾಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ವೈಕ್ತಿಕಕ ರನ್ ಹೊಡೆದ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡಿನ ನಥನ್ ಆಸ್ಟ್ಲೆ, ನಾಲ್ಕನೇ ಸ್ಥಾನದಲ್ಲಿ ಜಿಂಬಾಬ್ವೆಯ ಆಂಡಿ ಫ್ಲವರ್, ಐದನೇ ಸ್ಥಾನದಲ್ಲಿ ಭಾರತದ ಸೌರವ್ ಗಂಗೂಲಿ ಇದ್ದಾರೆ. ಇನ್ನು 162 ರನ್ ಸಿಡಿಸುವ ಮೂಲಕ ಅಫ್ಘಾನಿಸ್ತಾನದ ಪರ ಏಕದಿನ ಕ್ರಿಕೆಟ್ನಲ್ಲಿ ಜದ್ರಾನ್ ಗರಿಷ್ಠ ಸ್ಕೋರ್ ಹೊಡೆದ ಬ್ಯಾಟ್ಸ್ಮನ್ ಆಗಿದ್ದರು. ಇದೀಗ ತಮ್ಮದೇ ದಾಖಲೆಯನ್ನ ಮುರಿದಿದ್ದಾರೆ.
ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ವೇಳೆ ಆಸ್ಟ್ರೇಲಿಯಾ ವಿರುದ್ಧ ಜದ್ರಾನ್ ಶತಕ ಸಿಡಿಸಿ ಮಿಂಚಿದ್ದರು. ವಿಶ್ವದಾಖಲೆ ಬರೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡದ ಆರಂಭ ಕಳಪೆಯಾಗಿತ್ತು. ಸ್ಟಾರ್ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಸೆದಿಕುಲ್ಲಾ ಅಟಲ್, ರಹಮತ್ ಷಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲಿಲ್ಲ.
ನಾಲ್ಕನೇ ವಿಕೆಟ್‌ಗೆ ಆರಂಭಿಕ ಇಬ್ರಾಹಿಂ ಜದ್ರಾನ್ ಅವರನ್ನು ಸೇರಿಕೊಂಡ ಹಶ್ಮತುಲ್ಲಾ ಶಾಹಿದಿ ತಂಡಕ್ಕಾಗಿ ಉತ್ತಮ ಮೊತ್ತವನ್ನು ಕಲೆ ಹಾಕಿದರು. ಅಲ್ಲದೆ 37 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಆಸರೆಯಾದರು. ನಾಲ್ಕನೇ ವಿಕೆಟ್‌ಗೆ ಇಬ್ರಾಹಿಂ ಜದ್ರಾನ್ ಹಾಗೂ ಹಶ್ಮತುಲ್ಲಾ ಶಾಹಿದಿ ಜೊತೆಗೂಡಿ ತಂಡಕ್ಕೆ ಶತಕದ ಜೊತೆಯಾಟ ಆಡಿದರು.
ಐದನೇ ವಿಕೆಟ್‌ಗೆ ಇಬ್ರಾಹಿಂ ಜದ್ರಾನ್ ಹಾಗೂ ಮೊಹಮ್ಮದ್ ನಬಿ ಜೋಡಿ ಸ್ಫೋಟಕ ಜೊತೆಯಾಟದ ಮೂಲಕ ಉತ್ತಮ ಸ್ಕೂರ್ ನೀಡಿದರು. ನಬಿ 2 ಬೌಂಡರಿ, 3 ಸಿಕ್ಸರ್ ನೆರವಿನಿಂದ 40 ರನ್ ಬಾರಿಸಿ ವಿಕೆಟ್ ನೀಡದರು. ಈ ಮಹತ್ವದ ಪಂದ್ಯದಲ್ಲಿ ಅಫ್ಘಾನಿಸ್ತಾನ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ ಇಬ್ರಾಹಿಂ ಜದ್ರಾನ್ ಇಂಗ್ಲೆಂಡ್ ಬೌಲರ್‌ಗಳ ಬೆವರಿಳಿಸಿದರು. ಜದ್ರಾನ್ ಅವರು 177 ರನ್ ಸಿಡಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ವ್ಯಯಕ್ತಿಕ ಗರಿಷ್ಠ ರನ್ ಬಾರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು.