ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧ ಆಯ್ಕೆ

Share this post :

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೊಡಗಿನ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನಲ್ಲೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಣೆ ಮಾಡಿದ ಅನುಭವ ಇರುವ ರಮೇಶ್‌ ಕುಟ್ಟಪ್ಪ, ಪ್ರಸ್ತುತ ಪ್ರತಿನಿಧಿ ದಿನಪತ್ರಿಕೆ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ರಮೇಶ್‌ ಕುಟ್ಟಪ್ಪ ಅವರಿಗೆ ಕೂರ್ಗ್‌ ಬಝ್‌ ಬಳಗದ ವತಿಯಿಂದ ಅಭಿನಂದನೆಗಳು.

coorg buzz
coorg buzz