ಮಡಿಕೇರಿ : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಮಡಿಕೇರಿಯಲ್ಲೂ ಕೂಡಾ ಪಿಡಬ್ಲ್ಯೂಡಿ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ.
ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಗಿರೀಶ್ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಡಿಕೇರಿಯಲ್ಲಿನ ಕಚೇರಿ, ಕುಶಾಲನಗರ, ಮೈಸೂರಿನ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆಂದು ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆಯಲ್ಲಿ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿಯಾಗಿದೆ.



