ಅನಿತಾ ಭಾಸ್ಕರ್ ಅವರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”

Anita Bhaskar

Share this post :

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು (Award) ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಕರ್ನಾಟಕ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ‘ಕೋಸ್ಟರ್ ಮಾಸ್ಟರ್ ಪ್ಲಾನ್’ ಅನುಮೋದನೆ ಹಾಗೂ ಪಡುಬಿದ್ರೆ ಸಮುದ್ರ ತೀರದಲ್ಲಿ (ಉಡುಪಿ ಜಿಲ್ಲೆ) “ಬ್ಲೂ ಪ್ಲಾಗ್ ಬೀಚ್” ಯೋಜನೆ ಅನುಷಾ್ಟನಗೊಳಿಸಿ ಅತ್ಯುತ್ತಮ ಬೀಚ್ ನ್ನು ಅಭಿವೃದ್ಧಿ ಪಡಿಸಿರುತ್ತಾರೆ. ಸೈಂಟ್ ಮೇರಿ ದ್ವೀಪವನ್ನು ಅಭಿವೃದ್ಧಿ, “ಮಲ್ಪೆ ಬೀಚ್ ಸೀ-ವಾಕ್” ಯೋಜನೆಯನ್ನು ಅನುಷಾ್ಟನಗೊಳಿಸುವುದರಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ.

ಉಡುಪಿ ಜಿಲ್ಲೆಯ ಅತ್ಯುತ್ತಮ ಸೇವೆಗಾಗಿ ಇವರಿಗೆ 2019ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ”ಯನ್ನು ಈ ಹಿಂದೆ ನೀಡಿ ಗೌರವಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮತ್ತು ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುವಾಗ ಕೈಗೊಂಡ ಯೋಜನೆಗಳು ಮತ್ತು ಪ್ರವಾಸೋದ್ಯಮ ಇಲಾಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ನೀಡುವ ರಾಜ್ಯ ಮಟ್ಟ ಪ್ರಶಸ್ತಿಯನ್ನು ಪ್ರಧಾನ ಮಾಡಿ ಸನ್ಮಾನಿಸಿ ಗೌರವಿಸಿದೆ.