ಮಡಿಕೇರಿ : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹೊದವಾಡದ ರಾಫಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು.
ಶೈಕ್ಷಣಿಕವಾಗಿ ಸಾಧನೆಗೈಡ ಭಾಷಿತ, ಡಿಯಾನ, ಚರಿಷ್ಮಾ, ಹೇಮಾವತ, ಸಫಾನಾ, ಫಾಹಿನ ಅವರನ್ನು ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಳೆ ವಿದ್ಯಾರ್ಥಿಗಳ ಸಂಘದ ಮುಖ್ಯ ಕಾರ್ಯದರ್ಶಿ ರಫೀಕಲಿ ಕುಂಡಂಡ ಕುಂಜಿಲ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ, ಪಾರಿತೋಷಕ ಮತ್ತು ನಗದು ನೀಡಿ ಗೌರವಿಸಿದರು. ಜೊತೆಗೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಂಸನಾ ಪತ್ರ ಹಸ್ತಾಂತರಿಸಲಾಯಿತು.
ನಾಪೋಕ್ಲು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಗೆ ಸಾಮಾಜಿಕ ಕೆಡುಕುಗಳ ಬಗ್ಗೆ ಮತ್ತು ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು,.
ಕುಂಜಿಲ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ, ಶ್ರೀರಾಮ ಟ್ರಸ್ಟ್ ಶಾಲೆಯ ಮುಖ್ಯ ಶಿಕ್ಷಕಿ ಶಾರದಾ ಕಲಿಯಾಟಂಡ, ರಾಫಲ್ಸ್ ಕಾಲೇಜು ಪ್ರಾಂಶುಪಾಲ ತನ್ವೀರ್, ಬಲ್ಲಮಾವಟಿ ಶಾಲೆಯ ಶಿಕ್ಷಕ ಮೆಹಬೂಬ್, ಶಂಸುಲ್ ಉಲಮಾ ಎಜುಕೇಶನ್ ಅಕಾಡೆಮಿ ಕಾರ್ಯದರ್ಶಿ ಬಷೀರ್ ಎಡಪಲ, ಮರ್ಕಜ್ ವಿದ್ಯಾ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಹಾಜಿ ಕುಂಜಿಲ, ಆಕ್ಸ್ಫರ್ಡ್ ಶಾಲೆಯ ಮಾಲೀಕ ಶಾಹಿದ್ ಕೊಟ್ಟಮುಡಿ ಆಗಮಿಸಿದ್ದರು.
