ಮಡಿಕೇರಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆಯಿತು.
ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ರೈ ಪುನರಾಯ್ಕೆಯಾದರು. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಂಟರ ಸಂಘದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್ ರೈ ನೇತೃತ್ವದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಜಗದೀಶ್ ರೈ, ಜಾಗತಿಕ ಬಂಟರ ಒಕ್ಕೂಟದಲ್ಲಿ ಕೊಡಗು ಜಿಲ್ಲೆಗೂ ಸ್ಥಾನ ಸಿಕ್ಕಿದೆ. ಇದರಿದಾಗಿ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯ ಬಾಂಧವರ ಏಳಿಗೆಗೆ ನೆರವು, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ವಿವಿಧ ರೀತಿಯ ನೆರವು ಒಕ್ಕೂಟದಿಂದ ಸಿಗಲಿದೆ ಎಂದು ತಿಳಿಸಿದರು. ಈ ಸಂಬಂಧಿತವಾಗಿ ಒಕ್ಕೂಟಕ್ಕೆ ಜಿಲ್ಲಾ ಸಂಘದ ವತಿಯಿಂದ ಮನವಿ ಸಲ್ಲಿಸಿರುವುದಾಗಿಯೂ ತಿಳಿಸಿದರು.
ವೀರಾಜಪೇಟೆ ತಾಲೂಕು ಅಧ್ಕಕ್ಷ ಲೀಲಾಧರ ರೈ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜನಾರ್ದನ ಶೆಟ್ಟಿ, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಬೇಬಿ ರೈ, ಬಂಟರ ಭವನ ಟ್ರಸ್ಟ್ ಕಾರ್ಯದರ್ಶಿ ಸತೀಶ್ ರೈ ಫಾರೆಸ್ಟ್ ವ್ಯಾಲಿ, ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ, ವೀರಾಜಪೇಟೆ ಮಹಿಳಾ ಘಟಕ ಅಧ್ಯಕ್ಷೆ ನೀತು ರೈ, ಜಿಲ್ಲಾ ಸಂಘದ ನಿರ್ದೇಶಕರಾದ ಶರತ್ ಶೆಟ್ಟಿ, ಮನೋಹರ್ ಆಳ್ವ ಪಾಲ್ಗೊಂಡಿದ್ದರು.




