ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

Share this post :

ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ ಕಾಲೇಜಿಗೆ ಕೀರ್ತಿ ತರಲೆಂದು ಶುಭ ಹಾರೈಸಿರುತ್ತಾರೆ.
ಹೆಚ್ ಎಸ್ ಜೀವನ್, ಶಿವಕುಮಾರ್ ಮತ್ತು ಪೂರ್ಣಿಮಾ ದಂಪತಿಯವರ ಸುಪುತ್ರ.

coorg buzz
coorg buzz