ಮಡಿಕೇರಿ : ಧರ್ಮಸ್ಥಳ ಪ್ರಕರಣ ವಿಚಾರವಾಗಿ ಬುರುಡೆ ಗ್ಯಾಂಗ್‌ಗೆ ತಪ್ಪಿನ ಅರಿವಾಗಿದೆ. ಹಾಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದೆ ಎಂದು ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಹೇಳಿದರು.
ಮಡಿಕೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್ ಧರ್ಮಸ್ಥಳದ ಖ್ಯಾತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಬುರುಡೆ ಗ್ಯಾಂಗ್ ಹುನ್ನಾರ ಮಾಡಿತ್ತು. ಅದೇ ತಮ್ಮ ಪಾಲಿಗೆ ಉರುಳಾಗ್ತಿದ್ದಂತೆ ಯೂಟರ್ನ್ ಹೊಡೆದಿದೆ. ಸುಳ್ಳು ಪ್ರಕರಣ ದಾಖಲಿಸಿದ್ರೆ ೧೦ ವರ್ಷ ಕಠಿಣ ಶಿಕ್ಷೆ ಇದೆ ಎಂಬುದು ಅರಿವಾಗಿ ಮೂಲ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದೆ. ಆದಷ್ಟು ಶೀಘ್ರದಲ್ಲಿ ಬುರುಡೆ ಗ್ಯಾಂಗ್ ವಿರುದ್ಧ ಎಸ್‌ಐಟಿ ಕೇಸ್ ದಾಖಲಿಸಿ, ಅವರನ್ನು ಬಂಧಿಸಬೇಕೆಂದು ರಂಜನ್ ಒತ್ತಾಯಿಸಿದರು.



