ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!

Share this post :

ಮಡಿಕೇರಿ : ಪ್ರಸಕ್ತ (೨೦೨೫-೨೬) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೨೦೨೫-೨೬ ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್‌ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಮಾಹಿತಿ ಕೇಂದ್ರ, ಸೋಮವಾರಪೇಟೆ ದೂರವಾಣಿ ಸಂಖ್ಯೆ ೮೫೪೮೦೬೮೫೧೯, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ ೯೯೭೨೭೯೯೦೯೧ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

coorg buzz
coorg buzz