ಉದ್ಯೋಗಾವಕಾಶ: ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

teacher

Share this post :

coorg buzz

ಮಡಿಕೇರಿ:- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ದೂರವಾಣಿ ಸಂಖ್ಯೆ 9482894676 ಇವರನ್ನು ಅಥವಾ ಮುಖ್ಯ ಶಿಕ್ಷಕರು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ ದೂರವಾಣಿ ಸಂಖ್ಯೆ: 8618546009 ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.