ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಿಂದ ಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನ

Share this post :

coorg buzz

ಮಡಿಕೇರಿ : ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್‌ನಗರ ಮೈಸೂರು ಇಲ್ಲಿ ೨ ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಈ ವಿಶೇಷ ಡಿ.ಎಡ್ ತರಬೇತಿಯು ಸಾಮಾನ್ಯ ಡಿ.ಎಡ್‌ಗೆ ಸಮಾನಾವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.೫೦(ಎಸ್.ಸಿ/ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.೪೫ ಅಂಕಗಳೊಂದಿಗೆ ತೇರ್ಗಡೆಯಾದ ಆಸಕ್ತ ವಿದ್ಯಾರ್ಥಿಗಳು ಜುಲೈ, ೧೨ ರೊಳಗೆ ಅರ್ಜಿ ಸಲ್ಲಿಸಬಹುದು.
ಈ ತರಬೇತಿಗೆ ಸಂಬಂಧಿಸಿದ ವಿವರವಾದ ಮಾಹಿತಿ ಹಾಗೂ ಅರ್ಜಿ ನಮೂನೆ ಮೈಸೂರು ಜಿಲ್ಲಾ ವೆಬ್‌ಸೈಟ್ hಣಣಠಿs://ಟಿbeಡಿ-ಡಿehಚಿbಛಿouಟಿಛಿiಟ.gov.i ನಲ್ಲಿ ಲಭ್ಯವಿರುತ್ತದೆ. ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಿಸುವ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು, ಅಂಧ ಮಕ್ಕಳ ಬೋಧಕರ ತರಬೇತಿ ಕಾರ್ಯಕ್ರಮದಲ್ಲಿ ಎಸ್.ಸಿ/ ಎಸ್.ಟಿ ಮತ್ತು ವಿಕಲಚೇತನ ವ್ಯಕ್ತಿಗಳಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂಕಪಟ್ಟಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ವಿಕಲಚೇತನ ವ್ಯಕ್ತಿಯಾಗಿದ್ದಲ್ಲಿ ಯುಡಿಐಡಿ ಗುರುತಿನ ಪತ್ರ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು(ತರಬೇತಿ) ಸರ್ಕಾರಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್‌ನಗರ, ಮೈಸೂರು ಇವರ ದೂರವಾಣಿ ಸಂಖ್ಯೆ. ೦೮೨೧-೨೪೯೧೬೦೦, ೨೯೫೯೬೦೦, ೯೧೧೩೫೬೧೬೨೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.