ಮಿಲಿಟರಿ ಪಿಂಚಣಿ ಇಲ್ಲದ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

Share this post :

coorg buzz

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ ಡಿಪ್ಲೋಮ ಜೆಓಸಿ/ ಪ್ರೋಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ(ಅಧಿಕಾರಗಳನ್ನು ಹೊರತು ಪಡಿಸಿ) ಶಿಷ್ಯ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯ ಮಾದರಿಗಳನ್ನು. ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುರ್ನಸತಿ ಇಲಾಖೆ ಮಡಿಕೇರಿ ರವರಿಂದ ಪಡೆದು ಸೆಪ್ಟೆಂಬರ್, 30 ರೊಳಗೆ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಿಂಟಿ ನಿರ್ದೇಶಕರು ತಿಳಿಸಿದ್ದಾರೆ.