ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Anganwadi workers

Share this post :

ಮಡಿಕೇರಿ:- ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ (Anganwadi workers), ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜೂನ್ 6 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಮಾರ್ಗಸೂಚಿ/ ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢೀಕೃತ ದಾಖಲೆಗಳನ್ನು ಡಿಜಿ ಲಾಕರ್ ಬಳಸಿ ಸ್ಕ್ಯಾನ್ ಮಾಡಿ ಅರ್ಜಿ ಸಲ್ಲಿಸುವುದು.

ಆನ್‍ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯಥಿಗಳಿಗೆ ಜೂನ್, 09 ಕ್ಕೆ 19 ವರ್ಷ ಪೂರ್ಣಗೊಂಡಿರಬೇಕು. ಹಾಗೂ 35 ವರ್ಷ ಮೀರಿರಬಾರದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಭ್ಯರ್ಥಿಯು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.