ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

Share this post :

ಮಡಿಕೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅಂಗನವಾಡಿ ಕಾರ್ಯಕರ್ತೆ ಮಡಿಕೇರಿ 18, ಸೋಮವಾರಪೇಟೆ 15, ಪೊನ್ನಂಪೇಟೆ 21 ಒಟ್ಟು 54, ಅಂಗನವಾಡಿ ಸಹಾಯಕಿಯರು ಮಡಿಕೇರಿ 37, ಸೋಮವಾರಪೇಟೆ 63, ಪೊನ್ನಂಪೇಟೆ 61 ಒಟ್ಟು 161.
ಆಸಕ್ತ ಸ್ಥಳೀಯ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/
ಮೂಲಕ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಯನ್ನು ನವೆಂಬರ್ 13 ರಂದು ಸಂಜೆ 5:30 ಗಂಟೆಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್‍ಸೈಟ್ ಹಾಗೂ ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನಕುಮಾರ್ ತಿಳಿಸಿದ್ದಾರೆ.

coorg buzz
coorg buzz