ಯುವಜನರ ಗಮನಕ್ಕೆ: ಮಾಸಿಕ Rs.3000 ಯುವನಿಧಿಗೆ ಅರ್ಜಿ ಆಹ್ವಾನ

Yuva Nidhi Scheme

Share this post :

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ (Yuva Nidhi) ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ. 2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಮಾರ್ಚ್, ಏಪ್ರಿಲ್, ಮೇ ಮಾಹೆಯ ಸ್ವಯಂ ಘೋಷಣೆಯನ್ನು ಮೇ ತಿಂಗಳಲ್ಲಿ 25 ನೇ ದಿನಾಂಕದೊಳಗೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ(9449692691) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.