ಗ್ರಾಮ ಒನ್ ಕೇಂದ್ರ ನಡೆಸಲು ಆಸಕ್ತಿ ಹೊಂದಿದ್ದೀರಾ?- ಈ ಗ್ರಾಮಗಳಲ್ಲಿ ಅವಕಾಶವಿದೆ..!

Share this post :

coorg buzz

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯತ್‌ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ.
ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net ಈ-ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.