ಅರೆಭಾಷೆ ಸಾಹಿತ್ಯ ಅಕಾಡೆಮಿ ವತಿಯಿಂದ ಸಂಶೋಧನಾ ಪ್ರಬಂಧ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

Share this post :

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ ವಿಚಾರ, ಜಾನಪದ ಹಾಗೂ ಕಲೆಗೆ ಸಂಬಂಧಿಸಿದ ಸಂಶೋಧನಾ ಪ್ರಬಂಧಕ್ಕೆ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೨೧ ಕೊನೆಯ ದಿನವಾಗಿದೆ. ಬಂದಿರುವ ಅರ್ಜಿಗಳನ್ನು ಆಯ್ಕೆ ಸಮಿತಿಯಲ್ಲಿ ಪರಿಶೀಲಿಸಿ ನಾಲ್ಕು ಸೂಕ್ತ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ತಲಾ ರೂ ೭೫,೦೦೦ ದಂತೆ ಫೆಲೋಶಿಫ್ ನೀಡಲಾಗುವುದು. ಈ ಹಿಂದೆ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸಿದವರಿಗೆ ಅವಕಾಶ ಇರುವುದಿಲ್ಲ. ಫೆಲೋಶಿಫ್‌ಗೆ ಆಯ್ಕೆಯಾದವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೀತಿ ನಿಯಮಾವಳಿಗಳಿಗೆ ಬದ್ದರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ರಿಜಿಸ್ಟ್ರಾರ್‌ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ.ಸಂ.೦೮೨೭೨- ೨೨೩೦೫೫, ೬೩೬೨೫೨೨೬೭೭ ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ತಿಳಿಸಿದ್ದಾರೆ.

coorg buzz
coorg buzz