ರಸಗೊಬ್ಬರ ಖರೀದಿಸಲು ಇನ್ನು ಎಫ್‍ಐಡಿ ಕಡ್ಡಾಯ

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು. ಅಷ್ಟೇ ಅಲ್ಲ ತಮ್ಮ ಭೂಮಿಯನ್ನು ಸಹ ಎಫ್‍ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ. ಹೌದು ರಸಗೊಬ್ಬರ ತಯಾರಿಕೆಗೆ ವಿದೇಶದಿಂದ ಕಚ್ಚಾಸಾಮಾಗ್ರಿ ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಯುದ್ದದಿಂದ ರಸಗೊಬ್ಬರ ತಯಾರಿಕೆ ಕಚ್ಚಾ ಸಾಮಾಗ್ರಿಯ ಆಮದಿನಲ್ಲಿ ಭಾರಿ ಸಮಸ್ಯೆಯಾಗಿದೆ, ಹೀಗಾಗಿ ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಇದರಿಂದ ರಸಗೊಬ್ಬರ ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ. ಈ […]
ವೈದ್ಯರ ಚೀಟಿ ಇಲ್ಲದೆ ಔಷಧ ಮಾರುವಂತಿಲ್ಲ: ಮೆಡಿಕಲ್ ಶಾಪ್‌ಗಳಿಗೆ ಅಧಿಕಾರಿಗಳ ಖಡಕ್ ವಾರ್ನಿಂಗ್

ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿರುವ ವಿವಿಧ ಔಷಧ ಅಂಗಡಿಗಳಿಗೆ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದಕ ವಸ್ತುಗಳ ನಿಯಂತ್ರಣದ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಅಂಗಡಿ ಮಾಲೀಕರಿಗೆ ಕಾನೂನು ಪಾಲಿಸುವಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ. ಮಾದಕ ವಸ್ತುಗಳ ಮಾರಾಟ ತಡೆಗಟ್ಟುವ ಸರ್ಕಾರದ ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಔಷಧ ಮಳಿಗೆಯಲ್ಲೂ ಕಡ್ಡಾಯವಾಗಿ “ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧಿ ಮಾರಾಟ ಮಾಡಲಾಗುವುದಿಲ್ಲ” ಎಂಬ ಸ್ಪಷ್ಟ […]
ಕಾವೇರಿ ಎಜುಕೇಶನ್ ಸೊಸೈಟಿ: ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ

ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಾ ಮುಂದಕ್ಕೆ ಸಾಗಲು ಅಲ್ಲಿನ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಅತ್ಯಂತ ಮುಖ್ಯವಾದದ್ದು ಎಂದು ಕಾವೇರಿ ಎಜುಕೇಶನ್ ಸೊಸೈಟಿ ರಿ. ಅಧ್ಯಕ್ಷರಾದ ಎಂ.ಎಸ್. ಮುತ್ತಣ್ಣ ಅಭಿಪ್ರಾಯಪಟ್ಟರು . ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ಕಾವೇರಿ ಎಜುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ನಿವೃತ್ತ ಸಿಬ್ಬಂದಿಗಳ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಂದು ಸಂಸ್ಥೆಯ ಏಳಿಗೆಯೂ ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಮೇಲೆ ಅವಲಂಬಿತವಾಗಿದೆ. ಸಿಬ್ಬಂದಿಗಳು ಸಂಸ್ಥೆಯ ಏಳಿಗೆಗೆ ಶ್ರಮಿಸಿ ತಮ್ಮ ಸೇವೆಯನ್ನು […]
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಮಗ್ಗುಲ, ಕುಕ್ಲೂರು, ಕದನೂರು, ಬೊಳ್ಳುಮಾಡು, ಕಾಕೋಟುಪರಂಬು, ಬೇತ್ರಿ, ಪಾಲಂಗಾಲ, ಕೆದಮಳ್ಳೂರು, ಆರ್ಜಿ, ಬೇಟೋಳಿ, ಪೆರಂಬಾಡಿ, ಬಿಟ್ಟಂಗಾಲ, ಬಾಳುಗೋಡು, ವಿ.ಬಾಡಗ, ಕುಟ್ಟಂದಿ, ಬಿ.ಶೆಟ್ಟಿಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ […]
ಬೇಸಿಗೆಯಲ್ಲಿ ಗಿಡಗಳಿಗೆ ನೀರು ಹಾಕಲು ಯಾವುದು ಬೆಸ್ಟ್ ಟೈಮ್?

ಬೇಸಿಗೆಯ ತೀವ್ರತರವಾದ ಬಿಸಿಲಿನ ತಾಪಕ್ಕೆ ಮನುಷ್ಯರು ಹಾಗೂ ಪ್ರಾಣಿಗಳಂತೆ ಮನೆಯಲ್ಲಿ ಬೆಳೆಸುವ ಮರಗಿಡಗಳು ಸಹ ತೀವ್ರವಾಗಿ ಬಾಡುತ್ತವೆ. ಇಂತಹ ಪ್ರತಿಕೂಲ ಹವಾಮಾನದಲ್ಲಿ ಸಸ್ಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯವಾಗಿರುತ್ತದೆ. ಅತಿಯಾದ ಉಷ್ಣಾಂಶದಿಂದ ಗಿಡಗಳು ಒಣಗುವ ಮತ್ತು ಸಾಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದ್ದರಿಂದ, ಸಸ್ಯಗಳ ರಕ್ಷಣೆಗೆ ಸೂಕ್ತ ನಿರ್ವಹಣೆ ಮತ್ತು ಸರಿಯಾದ ಪ್ರಮಾಣದ ನೀರಿನ ಪೂರೈಕೆ ಪ್ರಮುಖ ಪಾತ್ರ ವಹಿಸುತ್ತದೆ. ಬಿಸಿಲಿನ ಝಳಕ್ಕೆ ಸಸಿಗಳು ಒಣಗದಂತೆ ತಡೆಯಲು ಬಹುತೇಕರು ಬೆಳಗ್ಗೆ ಮತ್ತು ಸಂಜೆ ನಿರಂತರವಾಗಿ ನೀರನ್ನು ಹಾಕುತ್ತಾರೆ. […]
ಮಕ್ಕಳಿಗೆ ಐಸ್‌ಕ್ರೀಮ್, ಕೋಲ್ಡ್ ಡ್ರಿಂಕ್ಸ್ ಕೊಡ್ತಿದ್ದೀರಾ? ಅದರ ಬದಲು ಈ ಆರೋಗ್ಯಕರ ತಿನಿಸುಗಳನ್ನು ಟ್ರೈ ಮಾಡಿ!

ಬೇಸಿಗೆಯ ತಾಪಮಾನವು ಹೆಚ್ಚಾಗುತ್ತಿರುವ ಪ್ರಸ್ತುತ ದಿನಗಳಲ್ಲಿ, ಬಿಸಿಲಿನ ಝಳಕ್ಕೆ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಶಾಲೆಯಲ್ಲಿ ಅಥವಾ ಮನೆಯಲ್ಲಿರುವ ಮಕ್ಕಳನ್ನು ಶಾಖದ ಹೊಡೆತದಿಂದ ರಕ್ಷಿಸಲು, ಪೋಷಕರು ಸಾಮಾನ್ಯವಾಗಿ ಐಸ್ ಕ್ರೀಮ್, ತಂಪು ಪಾನೀಯಗಳು ಮತ್ತು ಸಕ್ಕರೆ ಭರಿತ ಮಿಲ್ಕ್‌ಶೇಕ್‌ಗಳನ್ನು ನೀಡುತ್ತಾರೆ. ಆದರೆ ಇವುಗಳಿಂದ ನಿರ್ಜಲೀಕರಣ, ಗಂಟಲು ನೋವು ಹಾಗೂ ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ತಜ್ಞರ ಎಚ್ಚರಿಕೆ ಮತ್ತು ಅಪಾಯಗಳು ಮಕ್ಕಳ ತಜ್ಞೆ ಡಾ. ಪ್ರೀತಿ ಗಡ್ಡದ್ ಅವರ ಪ್ರಕಾರ, ಬೇಸಿಗೆಯಲ್ಲಿ ಮಕ್ಕಳು ಇಷ್ಟಪಡುವ […]
Paytm ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿದ RBI

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರದಂದು ಒಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಈ ನಿರ್ಧಾರದ ಅನ್ವಯ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಇನ್ನು ಮುಂದೆ ಈ ಸಂಸ್ಥೆಯು ಯಾವುದೇ ಬ್ಯಾಂಕಿಂಗ್ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಆರ್‌ಬಿಐ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸುತ್ತಾ ಬಂದಿತ್ತು. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ರ ಸೆಕ್ಷನ್ 22(4) ರ […]
ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಸಭೆ

ಪ್ರವಾಸಿಗರ ಸುರಕ್ಷತೆ ಹಾಗೂ ನಿಯಮಗಳ ಪಾಲನೆಗೆ ಒತ್ತು ನೀಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೋಂಸ್ಟೇ, ಹೋಟೆಲ್ ಹಾಗೂ ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಹೋಂಸ್ಟೇ ಮತ್ತು ಹೋಟೆಲ್‌ಗಳ ಕಡ್ಡಾಯ ನೋಂದಣಿ, ಪ್ರವಾಸಿಗರ ಸುರಕ್ಷತಾ ಕ್ರಮಗಳು, ಸಿಬ್ಬಂದಿಯ ಹಿನ್ನೆಲೆ (ಗುಣನಡತೆ) ಪರಿಶೀಲನೆ ಹಾಗೂ ವಿದೇಶಿ ಪ್ರವಾಸಿಗರ ಕಡ್ಡಾಯ ನೋಂದಣಿ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ […]
SSLC Result: ಹೆಗ್ಗಳ ಸರ್ಕಾರಿ ಶಾಲೆಗೆ 100% ಫಲಿತಾಂಶ

ವಿರಾಜಪೇಟೆ: ಹೆಗ್ಗಳ (Heggala) ಗ್ರಾಮದ ಸರ್ಕಾರಿ ಪ್ರೌಢ ಶಾಲೆಯು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 100% ಫಲಿತಾಂಶವನ್ನು ಪಡೆಯುದರ ಮೂಲಕ ಸಾಧನೆಯನ್ನು ಮಾಡಿದೆ. ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಡಿಸ್ಟಿಂಕ್ಷನ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು, ಪ್ರಥಮ ಸ್ಥಾನದಲ್ಲಿ 19 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಸ್ಥಾನದಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿನಿ ಪ್ರೇಕ್ಷಾ ಬಿ. ಹೆಚ್.558 ಅಂಕಗಳನ್ನು ಪಡೆದುಕೊಂಡು 89.28% ಮೂಲಕ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಎಂದು ಮುಖ್ಯೋಪಾಧ್ಯಾಯರಾದ ಸುನೀತಾ ರವರು ಮಾಹಿತಿ ನೀಡಿದ್ದಾರೆ.
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಏಪ್ರಿಲ್, 25 ರಂದು (ನಾಳೆ) ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೋಮವಾರಪೇಟೆ ಕುಸುಬೂರು, ಕಾರೆಕೊಪ್ಪ, ಸಜ್ಜಳ್ಳಿ, ಯಡವಾರೆ, ಹೊಸತೋಟ, ಐಗೂರು, ಗರಗಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.