ಹುಲುಗುಂದ ಸಹಿಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ – L.K.G ದಾಖಲಾತಿಗೆ ಚಾಲನೆ

ಹಾರಂಗಿ : ಕೂಡುಮಂಗಳೂರು ಪಂಚಾಯತಿ ವ್ಯಾಪ್ತಿಯ (ಹಾರಂಗಿ)ಹುಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಮತ್ತು ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಆ ಪ್ರಯುಕ್ತ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ಬಳಿಕ ವೇದಿಕೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಉದ್ಘಾಟಿಸಿದರು. 2026-27ನೇ ಶೈಕ್ಷಣಿಕ ಸಾಲಿನಿಂದ L.K.G TO 1st STANDARD English Medium ಪ್ರಾರಂಭ ಮಾಡುವ ಸಲುವಾಗಿ ದಾಖಲಾತಿ ಪ್ರಕ್ರಿಯೆಗೆ ಅತಿಥಿಗಳು ಚಾಲನೆ ನೀಡಿದರು. ಶಾಲೆ ಮುಖ್ಯ ಶಿಕ್ಷಕ ರಾಜಣ್ಣ, ಪಂಚಾಯಿತಿ […]

ಕೊಡಗು ಜಿಲ್ಲಾ ತೀಯಾನ್ ಮಹಾಸಭಾ ಸಮಿತಿಗೆ ನೂತನ ಸಾರಥಿಗಳ ಆಯ್ಕೆ

Thiyan Mahasabha

ಮಡಿಕೇರಿ: ಇಲ್ಲಿನ ರಾಜ ದರ್ಶನ್ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ತೀಯಾನ್ ಮಹಾಸಭಾ ಜಿಲ್ಲಾ ಸಮಿತಿಯ ಪ್ರಮುಖ ಸಭೆಯಲ್ಲಿ ಸಂಘಟನೆಯ ಬಲವರ್ಧನೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿರಗಂದೂರಿನ ಎ.ಎನ್. ಪದ್ಮನಾಭ ಆಯ್ಕೆಯಾಗಿದ್ದಾರೆ. ಉಳಿದಂತೆ ಎಸ್.ಆರ್. ಅಶೋಕ್ ಕುಮಾರ್ (ಉಪಾಧ್ಯಕ್ಷ), ಶ್ರೀಮತಿ ಜ್ಯೋತಿ ಅರುಣ್ (ಪ್ರಧಾನ ಕಾರ್ಯದರ್ಶಿ), ಎಂ.ಕೆ. ಮೋಹನ್ (ಖಜಾಂಜಿ) ಹಾಗೂ ಎನ್.ಸಿ. ಸುದರ್ಶನ್ (ಸಂಘಟನಾ ಕಾರ್ಯದರ್ಶಿ) ಅವರನ್ನು ನೇಮಕ ಮಾಡಲಾಯಿತು. ಸಂಘಟನೆಯ ಗೌರವ ಸಲಹೆಗಾರರಾಗಿ […]

ಕುಡಿಯುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ,ಪರಿಶೀಲನೆ

kodagu District Collector

ನಗರದ ಸ್ಟೀವರ್ಟ್ ಹಿಲ್ ಬಳಿ ಇರುವ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಶುದ್ದ ಕುಡಿಯುವ ನೀರು ಶುದ್ದೀಕರಣ ಪ್ರಕ್ರಿಯೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿದರು. ಕುಡಿಯುವ ನೀರು ಸಂಬಂಧಿಸಿದಂತೆ ಅಮೃತ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಹಾಗೆಯೇ ಸ್ಟೀವರ್ಟ್ ಹಿಲ್ ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಾಗ ಸಂಬಂಧಿಸಿದಂತೆ ಆದಷ್ಟು ಬೇಗ ನಗರಸಭೆ ವ್ಯಾಪ್ತಿಗೆ ಪಡೆಯುವಂತೆ ಜಿಲ್ಲಾಧಿಕಾರಿ […]

ಜ.27 ಮತ್ತು 28 ರಂದು ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ  

ಮಡಿಕೇರಿ : ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್‍ಆರ್‍ಎಲ್‍ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ, 27 ಮತ್ತು 28 ರಂದು ನಗರದ ಗಾಂಧಿ ಮೈದಾನದ ಆವರಣದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

ಜ.24 ರಂದು ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ, 24 ರಿಂದ 26 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ […]

ಜ.22 ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ : ಪೊನ್ನಂಪೇಟೆಯ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಫೀಡರ್ ನಿರ್ವಹಣೆ/ ಜಿಒಎಸ್ ಬದಲಾವಣೆ ಕಾಮಗಾರಿ ಕೈಗೊಗೊಳ್ಳುತ್ತಿದೆ. ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್4-ತಿತಿಮತಿ, ಎಫ್5-ಪಾಲಿಬೆಟ್ಟ, ಎಫ್6 -ಬೇಗೂರು, ಎಫ್7-ಗೋಣಿಕೊಪ್ಪ, ಎಫ್8-ಪೊನ್ನಂಪೇಟೆ, ಎಫ್9-ಹಾತೂರು, ಎಫ್10-ಹೈಸೊಡ್ಲೂರು, ಎಫ್11-ಕೈಕೇರಿ, ಎಫ್12-ಬೆಕ್ಕಸೊಡ್ಲೂರು, ಎಫ್13 ದೇವನೂರು ಫೀಡರ್‍ನಲ್ಲಿ ಜನವರಿ 22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿ ಆಗುವ ಗ್ರಾಮಗಳಾದ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, […]

ಕ್ಲೋಸ್‌ಬರ್ನ್‌ ಸಹಿಪ್ರಾ ಶಾಲೆಯಲ್ಲಿ ಕ್ಲಸ್ಟರ್‌ ಮಟ್ಟದ ಕಲಿಕಾ ಹಬ್ಬ

ಮಡಿಕೇರಿ : ಕಡಗದಾಳು ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಸಿಆರ್‌ಪಿ ನಿಶಾ ಹಾಗೂ ಶಾಲೆ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳು ನಡೆದವು. ಮರಗೋಡು, ಅರೆಕಾಡು, ಬೋಯಿಕೇರಿ, ಕಟ್ಟೆಮಾಡು, ಕಡಗದಾಳು ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಾ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ವಿಜೇತರಿಗೆ ಅತಿಥಿಗಳು ಬಹುಮಾನ […]

ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ..!

ಸುಂಟಿಕೊಪ್ಪ : ಹೊಳೆಯಲ್ಲಿ ಮುಳುಗಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಹರದೂರಿನಲ್ಲಿ ಸಂಭವಿಸಿದೆ. ಮಹಮ್ ರಹೀಜ್(16) ಮಹಮದ್ ನಿಹಾಲ್ (16) ಮೃತ ದುರ್ದೈವಿಗಳು. ಸೋಮವಾರಪೇಟೆ ತಾಲ್ಲೂಕಿನ ಹರದೂರು ಹೊಳೆಗೆ ಈ ಇಬ್ಬರು ಯುವಕರು ಇಂದು ಮಧ್ಯಾಹ್ನ ಈಜಲು ತೆರಳಿದ್ದರು ಎನ್ನಲಾಗಿದೆ. ಡಿ. ಚೆನ್ನಮ್ಮ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ಇವರು ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ನುರಿತ ಈಜು ತಜ್ಞರು ಆಗಮಿಸಿ ಬಾಲಕರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ […]

ಕನ್ನಡ ಪಯಸ್ವಿನಿ ಅಚೀವ್ಮೆಂಟ್‌ ಅವಾರ್ಡ್ 2026- ಯುವ ಬಂಟ್ಸ್ ಅಸೋಸಿಯೇಷನ್‌ನಿಂದ ಸನ್ಮಾನ..!

ಮಡಿಕೇರಿ : ಕನ್ನಡ ಭವನದ ವತಿಯಿಂದ ನೀಡಲಾಗುವ ʼಕನ್ನಡ ಪಯಸ್ವಿನಿ ಅಚೀವ್ಮೆಂಟ್‌ ಅವಾರ್ಡ್-2026ʼಗೆ ಭಾಜನರಾಗಿರುವ ಸಾಧಕರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಮಡಿಕೇರಿಯ ಹೋಟೆಲ್‌ ಸಮುದ್ರ ಸಭಾಂಗಣದಲ್ಲಿ ಜರುಗಿದ ಕೊಡಗು ಜಿಲ್ಲಾ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕಿ ಪ್ರತಿಮಾ ಹರೀಶ್‌ ರೈ, ಪತ್ರಕರ್ತ ಕಿಶೋರ್‌ ರೈ ಕತ್ತಲೆಕಾಡು, ನಿರೂಪಕಿ ಹರ್ಷಿತಾ ಶೆಟ್ಟಿ ಅವರನ್ನು ಅತಿಥಿಗಳು ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲೆಯ ಹೆಸರಾಂತ ಚಿತ್ರ ಕಲಾವಿದ ಬಿ.ಕೆ. ಗಣೇಶ್‌ […]

ಕತ್ತಲೆಕಾಡುವಿನಲ್ಲಿ ಸಂಭ್ರಮದ ಸಂಕ್ರಾಂತಿ ದೀಪಾರಾಧನೆ – ನೂತನ ಧ್ವನಿವರ್ಧಕ ಲೋಕಾರ್ಪಣೆ

ಮಡಿಕೇರಿ : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ಸಂಕ್ರಾಂತಿ ದೀಪಾರಾಧನೆ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಟ್ರಸ್ಟ್‌ ಆವರಣದಲ್ಲಿ ಗುರುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಲು ಹಣತೆ ಬೆಳಗಿದರು. ಟ್ರಸ್ಟ್‌ನ ಭಜನಾ ತಂಡದ ಸದಸ್ಯರು ಭಜನೆ ಮೂಲಕ ಮೆರುಗು ನೀಡಿದರು. ಸಾರ್ವಜನಿಕರು ಹಾಗೂ ದಾನಿಗಳ ಸಹಕಾರದಿಂದ ನೂತನವಾಗಿ ಖರೀದಿಸಲಾದ ಧ್ವನಿವರ್ಧಕವನ್ನು ಕಲಾವಿದ ಸುಭಾಷ್‌ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಟ್ರಸ್ಟ್‌ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಭಜನೆ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 53 […]