ಕತ್ತಲೆಕಾಡು : ಸಂಕ್ರಾಂತಿ ದೀಪೋತ್ಸವ, ಭಜನೆ ಕಾರ್ಯಕ್ರಮ ಜ.15ಕ್ಕೆ

ಕಡಗದಾಳು : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಸಂಕ್ರಾಂತಿ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮ ಜ.15ರಂದು ಆಯೋಜಿಸಲಾಗಿದೆ. ಟ್ರಸ್ಟ್ ಆವರಣದಲ್ಲಿ ಸಂಜೆ 06 ಗಂಟೆಯಿಂದ ಕಾರ್ಯಕ್ರಮ ನಡೆಯಲಿದ್ದು, 6.30ಕ್ಕೆ ದೀಪೋತ್ಸವ, ರಾತ್ರಿ 7 ಗಂಟೆಗೆ ಟ್ರಸ್ಟ್‌ನ ವಿದ್ಯಾರ್ಥಿ ಘಟಕದ ಸದಸ್ಯರಿಂದ ಭಜನೆ, ರಾತ್ರಿ 8ಕ್ಕೆ ಮಂಗಳಾರತಿ, 8-15ಕ್ಕೆ ಫಲಹಾರ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಟ್ರಸ್ಟ್‌ಗೆ ನೂತನವಾಗಿ ಖರೀದಿಸಲಾದ ಧ್ವನಿವರ್ಧಕವನ್ನು ಲೋಕಾರ್ಪಣೆ ಮಾಡಲಾಗುವುದು. ಕೊನೆಯಲ್ಲಿ ಸುಭಾಷ್ ಮತ್ತು ತಂಡದಿಂದ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ […]
ಕೊಡಗು ಜಿಲ್ಲಾ ಮಲೆಯ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಮಲೆಯ ಸಮಾಜದ ನೂತನ ಅಧ್ಯಕ್ಷರಾಗಿ ಎಂ.ಕೆ. ಅಶೋಕ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಂ.ಎಸ್. ಮುತ್ತಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಬಿದ್ದಪ್ಪ ಎಂ.ಪಿ. , ಸಹಕಾರ್ಯದರ್ಶಿಯಾಗಿ ರೀನಾ ರೋಶನ್, ಖಜಾಂಚಿಯಾಗಿ ಎಂ.ಎ. ಮಂಜುನಾಥ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಬಿ. ಗಣೇಶ್, ಎಂ.ಕೆ. ಯತೀಶ್, ಎಂ.ಜಿ. ವಿಜಿತ್, ಎಂ.ಯು. ದರ್ಶನ್, ಎಂ.ಎಂ. ಹ್ಯಾರಿ, ಎಂ.ಯು. ಬೆಲ್ಲು ಅವರನ್ನು ಆಯ್ಕೆ ಮಾಡಲಾಯಿತು. […]
ಸಿಐಪಿಯು ವಿದ್ಯಾರ್ಥಿನಿ ಡಿಂಪಲ್‌ಗೆ ಪ್ರತಿಭಾ ರತ್ನ ಪ್ರಶಸ್ತಿ

ಕರಾಟೆ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನ ಪ್ರಥಮ ಪಿ.ಯು.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಡಿಂಪಲ್ . ಎಸ್. ವಿರಾಜಪೇಟೆ ತಾಲ್ಲೂಕು ಶಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡುವ ಪ್ರತಿಭಾರತ್ನ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಈ ವಿದ್ಯಾರ್ಥಿನಿ ಅರಕಲಗೂಡು ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಫ್ -2025 ರಲ್ಲಿ ಪ್ರಥಮ ಸ್ಥಾನ , ಅಸ್ಮಿತಾ ಖೇಲೋ ಇಂಡಿಯಾ -2025 ಸ್ಪರ್ಧೆಯಲ್ಲಿ […]
ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕರ್ನಾಟಕಕ್ಕೆ ದ್ವಿತೀಯ ಸ್ಥಾನ, ಕೊಡಗಿನ ನಂದಿನಿ ಸಾಧನೆ

ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿಯ ಉಡಾನ್ ಗ್ಲೋಬಲ್ ಶಾಲೆಯಲ್ಲಿ ನಡೆದ 7ನೇ ವರ್ಷದ ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವು ಅಮೋಘ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದ ಪ್ರತಿಭಾನ್ವಿತ ಕ್ರೀಡಾಪಟು ನಂದಿನಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕುಶಾಲನಗರದ ತರಬೇತುದಾರರಾದ ಜಾನ್ಸನ್ ಮತ್ತು ಕಾರ್ತಿಕ್ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆದಿದ್ದ ಕರ್ನಾಟಕ ತಂಡವು, ರಾಷ್ಟ್ರಮಟ್ಟದಲ್ಲಿ ಎದುರಾಳಿಗಳನ್ನು ಮಣಿಸಿ […]
ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರಾಗಿ ಜಗದೀಶ್ ರೈ ಅವಿರೋಧ ಪುನಾರಾಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘದ ಮುಂದಿನ ಸಾಲಿನ ಅಧ್ಯಕ್ಷರಾಗಿ ಬಿ.ಡಿ. ಜಗದೀಶ್ ರೈ ಅವಿರೋಧ ಆಯ್ಕೆಯಾಗಿದ್ದಾರೆ. ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಜಗದೀಶ್ ರೈ ಅವರನ್ನು ಸಭೆಯಲ್ಲಿದ್ದ ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. ಬಳಿಕ ಮಾತನಾಡಿದ ಅಧ್ಯಕ್ಷ ಜಗದೀಶ್ ರೈ, ಶೀಘ್ರದಲ್ಲಿ ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸುವುದಾಗಿ ತಿಳಿಸಿದರು. ಬಂಟರ ಭವನ ನಿರ್ಮಾಣಕ್ಕಾಗಿ ಬೇಕಾದ ಎಲ್ಲಾ ತೊಡಕುಗಳನ್ನು ನಿವಾರಿಸಿ, ಕಟ್ಟಡ ನಿರ್ಮಾಣಕ್ಕೆ ತಯಾರಿ […]
ಕೊಡಗು ರೆಡ್‌ಕ್ರಾಸ್ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ

ಮಡಿಕೇರಿ : ತಾಲೂಕಿನ ಸಾಧಕ ಅಂಗನವಾಡಿ ಕಾರ್ಯಕರ್ತೆಯರಿಗೆ ರೆಡ್‌ಕ್ರಾಸ್ ಕೊಡಗು ಘಟಕ ವತಿಯಿಂದ ಸನ್ಮಾನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ನಗರದ ರೆಡ್‌ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ ಉದ್ಘಾಟಿಸಿದರು. ಶಿಕ್ಷಕರಿಯರೆಂದರೆ ಮಕ್ಕಳ ಪಾಲಿನ ದೇವರಂತೆ. ಮಕ್ಕಳನ್ನು ಪ್ರೀತಿಯಿಂದ ಬೆಳೆಸುವಂತೆ ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ, ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯವಾದದ್ದು. ಪುಟ್ಟ ಮಕ್ಕಳ ಏಳಿಕೆಯಲ್ಲಿ ಮಹತ್ತರ ಪಾತ್ರವನ್ನು ಅವರು ನಿರ್ವಹಿಸುತ್ತಾರೆ ಎಂದರು. ಪ್ರಭಾರ […]
ಕೊಡಗು ಗೌಡ ಯುವ ವೇದಿಕೆ ವತಿಯಿಂದ ಶಾಸಕರ ಭೇಟಿ – ಕ್ರೀಡಾಕೂಟದ ಬಗ್ಗೆ ಚರ್ಚೆ

ಮಡಿಕೇರಿ : ಕೊಡಗು ಗೌಡ ಯುವ ವೇದಿಕೆಯ ನೂತನ ಆಡಳಿತ ಮಂಡಳಿಯ ಸದಸ್ಯರು ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡರನ್ನು ಭೇಟಿಯಾಗಿ ಏಪ್ರಿಲ್ ತಿಂಗಳಲ್ಲಿ ನಡೆಯುವ ಕ್ರೀಟಕೂಟದ ಕುರಿತು ಚರ್ಚಿಸಿದರು. ಅಧ್ಯಕ್ಷ ಬಾಳಾಡಿ ಮನೋಜ್ ನೇತೃತ್ವದಲ್ಲಿ ಶಾಸಕ ಮಂತರ್ ಗೌಡರನ್ನ ಕುಶಾಲನಗರದ ವಿಶ್ರಾಂತಿ ಗೃಹದಲ್ಲಿ ಭೇಟಿಯಾಗಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆಯುವ ಒಲಂಪಿಕ್ ಮಾದರಿಯ ಕ್ರೀಡಾ ಕೂಟದ ಕುರಿತು ಚರ್ಚಿಸಲಾಯಿತು. ಈ ಬಾರಿ ಕೊಡಗು ಗೌಡ ಯುವ ವೇದಿಕೆಯ ನೇತೃತ್ವದಲ್ಲಿ ಏಪ್ರೀಲ್ 27 ರಿಂದ […]
ಭೈರವಿ ವಿ.ಬಿ. ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

ಮಡಿಕೇರಿ : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಉಪನ್ಯಾಸಕಿ ಭೈರವಿ ವಿ.ಬಿ. ಅವರು ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮೂಲತಃ ಪೊನ್ನಂಪೇಟೆ ತಾಲ್ಲೂಕಿನ ಕೋತೂರು ಗ್ರಾಮದ ವಿಶಾಲಾಕ್ಷಿ ಮತ್ತು ಬೀರಪ್ಪ ದಂಪತಿಯ ಹಿರಿಯ ಮಗಳಾಗಿರುವ ಭೈರವಿ ವಿ.ಬಿ. ಅವರು ಮೈಸೂರು ವಿಶ್ವವಿದ್ಯಾ ನಿಲಯದ ಭೂಗೋಳಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಹೆಚ್. ಕಮಲ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “Geographical Analysis of Levels of Development in Kodagu District – […]
ಕಿಗ್ಗಾಲುವಿನ ಎಂ.ಎಸ್. ನಿಧಿಗೆ ತ.ರಾ.ಸು. ಪ್ರಶಸ್ತಿ

ಮೂರ್ನಾಡು : ಬೆಂಗಳೂರಿನ ಜನ್ಮ ಭೂಮಿ ಸಾಂಸ್ಕೃತಿಕ ನಾಗರೀಕ ವೇದಿಕೆಯ ವತಿಯಿಂದ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತ.ರಾ.ಸು. ಪ್ರಶಸ್ತಿಯನ್ನು ಕೊಡಗಿನ ನಿಧಿ ಎಂ.ಎಸ್. ಪಡೆದುಕೊಂಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕಾರಣ ಈ ಪ್ರಶಸ್ತಿಗೆ ಅವರನ್ನು ಆಯ್ಕೆಗೊಳಿಸಲಾಗಿತ್ತು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕಲಾಮಂದಿರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನಿಧಿ ಎಂ.ಎಸ್. ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. […]
ಸಮರ್ಥ ಸಾಹಿತ್ಯ ಪ್ರತಿಷ್ಟಾನದ ಪತ್ರಿಕೋದ್ಯಮ ಪ್ರಶಸ್ತಿಗೆ ಅನಿಲ್ ಹೆಚ್.ಟಿ. ಆಯ್ಕೆ

ಮಡಿಕೇರಿ : ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಠಾನವು ನೀಡುವ ವಾರ್ಷಿಕ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಮಡಿಕೇರಿಯ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಟಾನವು ವಾರ್ಷಿಕವಾಗಿ ಪತ್ರಿಕೋದ್ಯಮ, ಸಮಾಜಸೇವೆ, ಆರೋಗ್ಯ, ಶಿಕ್ಷಣ, ಸಾಹಿತ್ಯ, ಉದ್ಯಮ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿ ನೀಡುತ್ತಿದೆ. ಈ ವರ್ಷದ ಗಾಂಧಿ ಪ್ರಿಯ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ, ವಿದ್ಯುನ್ಮಾನ, ಬಾನುಲಿ ಮಾಧ್ಯಮಗಳಲ್ಲಿ ಹಾಗೂ […]