ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ – ಅಜ್ಜಮಾಡ ರಮೇಶ್ ಕುಟ್ಟಪ್ಪರಿಗೆ Coorg Buzz ಬಳಗದಿಂದ ಸನ್ಮಾನ

ಮಡಿಕೇರಿ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಕೊಡಗಿನ ಹಿರಿಯ ಪತ್ರಕರ್ತ, ಪ್ರತಿನಿಧಿ ಪತ್ರಿಕೆಯ ಸ್ಥಾನಿಕ ಸಂಪಾದಕ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಿಗೆ Coorg Buzz ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕೂರ್ಗ್ ಬಝ್ ಸ್ಟುಡಿಯೋದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಫಲ ತಾಂಬೂಲ ನೀಡಿ, ಶಾಲು ಹೊದಿಸಿ ಅಭಿನಂದಿಸಿದರು. ರಮೇಶ್ ಕುಟ್ಟಪ್ಪ ಕಳೆದ ಅವಧಿಯಲ್ಲೂ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಅವಧಿಗೆ ಸ್ಪರ್ಧೆ ಬಯಸಿ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿಗಳು ಇಲ್ಲದ […]
ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲರ ಪಾತ್ರ ಮಹತ್ವದ್ದು – ಬೆನೆಡಿಕ್ಟ್ ಆರ್ ಸಲ್ದಾನ

ಮಡಿಕೇರಿ : ವಿವಿಧ ಪ್ರಾಂತ್ಯವಾಗಿ ಹರಿದು ಹಂಚಿ ಹೋಗಿದ್ದ ದೇಶವನ್ನು ಒಗ್ಗೂಡಿಸಿ ಏಕತೆಯ ಮೂಲಕ ಬಲಿಷ್ಠ ಭಾರತ ದೇಶವನ್ನು ಕಟ್ಟುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಬಹಳ ಮಹತ್ವದ ಪಾತ್ರವನ್ನು ವಹಿಸಿದ್ದರು ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಏಕತಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಉಕ್ಕಿನ ಮನುಷ್ಯ ಪಟೇಲರು ದೇಶವನ್ನು ಒಗ್ಗೂಡಿಸಲು ಪಟ್ಟ ಶ್ರಮದ ಪ್ರತಿಫಲವಾಗಿ ನಾವಿಂದು ಒಗ್ಗೂಡಿದ ಭಾರತವನ್ನು ಕಾಣುತ್ತಿದ್ದೇವೆ. ಅವರು ಪಟ್ಟ ಶ್ರಮಕ್ಕೆ ದೇಶವಿಂದು […]
ರಾಜ್ಯದಲ್ಲಿ ನವೆಂಬರ್ ಕ್ರಾಂತಿ – ಸಿಎಂ ಬದಲಾವಣೆ..? – ಎ.ಎಸ್. ಪೊನ್ನಣ್ಣ ಹೇಳಿದ್ದೇನು..?

ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸಿಎಂ ಬದಲಾವಣೆಯ ಚರ್ಚೆಯೇ ಅಪ್ರಸ್ತುತ ಎಂದು ಹೇಳಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಂಪುಟ ಪುನಾರಚನೆಯನ್ನೇ ‘ಕ್ರಾಂತಿ’ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಪ್ರಸ್ತುತ, ಅನಗತ್ಯ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ವರಿಷ್ಠರು ಶಾಸಕರ […]
ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ – ಮಡಿಕೇರಿಯಲ್ಲಿ ಬಿಜೆಪಿಯಿಂದ ʼಏಕತಾ ನಡಿಗೆʼ

ಮಡಿಕೇರಿ : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗಿದ್ದು, ಮಡಿಕೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ಯಾತ್ರೆ’ ನಡೆಯಿತು. ದೇಶವನ್ನು ವಿಭಜಿಸುತ್ತಿರುವ ಶಕ್ತಿಗಳು ವಿಜೃಂಭಿಸುತ್ತಿರುವ ಈ ಸಮಯದಲ್ಲಿ ದೇಶದ ಏಕತೆ, ಸಮಗ್ರತೆ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದು ಪಕ್ಷದ ಪ್ರಮುಖರು ಹೇಳಿದರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಿಂದ ಆರಂಭವಾದ ಕಾಲ್ನಡಿಗೆ ಜಾಥಾಗೆ ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಹಾಗೂ […]
ಬುರುಡೆ ಗ್ಯಾಂಗ್ ವಿರುದ್ಧ SIT ಕೇಸ್ ದಾಖಲಿಸಿ, ಬಂಧಿಸಲಿ – ಅಪ್ಪಚ್ಚು ರಂಜನ್ ಆಗ್ರಹ..!

ಮಡಿಕೇರಿ : ಧರ್ಮಸ್ಥಳ ಪ್ರಕರಣ ವಿಚಾರವಾಗಿ ಬುರುಡೆ ಗ್ಯಾಂಗ್‌ಗೆ ತಪ್ಪಿನ ಅರಿವಾಗಿದೆ. ಹಾಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದೆ ಎಂದು ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಹೇಳಿದರು. ಮಡಿಕೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್ ಧರ್ಮಸ್ಥಳದ ಖ್ಯಾತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಬುರುಡೆ ಗ್ಯಾಂಗ್ ಹುನ್ನಾರ ಮಾಡಿತ್ತು. ಅದೇ ತಮ್ಮ ಪಾಲಿಗೆ ಉರುಳಾಗ್ತಿದ್ದಂತೆ ಯೂಟರ್ನ್ ಹೊಡೆದಿದೆ. ಸುಳ್ಳು ಪ್ರಕರಣ ದಾಖಲಿಸಿದ್ರೆ ೧೦ ವರ್ಷ ಕಠಿಣ ಶಿಕ್ಷೆ ಇದೆ ಎಂಬುದು ಅರಿವಾಗಿ ಮೂಲ […]
ಎಚ್.ವೈ. ಮೇಟಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಬೆಂಗಳೂರು : ಮಾಜಿ ಸಚಿವ ಎಚ್.ವೈ. ಮೇಟಿ ಅನಾರೋಗ್ಯದಿಂದಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಮೇಟಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.
ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ, ವಿಜಯಲಕ್ಷ್ಮೀ ಸಿಂಗ್ ಸೇರಿ 70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ ಮತ್ತು ಸಿನೆಮಾ ರಂಗದಲ್ಲಿ ವಿಜಯಲಕ್ಷ್ಮಿಸಿಂಗ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ನವೆಂಬರ್ 1ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು […]
ಮಹಿಳಾ ವಿಶ್ವಕಪ್ ಕ್ರಿಕೆಟ್ : ಆಸ್ಟ್ರೇಲಿಯಾವನ್ನು ಮಣಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟ ಭಾರತದ ವನಿತೆಯರು..!

ಮುಂಬೈ : ಜೆಮಿಮಾ ರೋಡ್ರಿಗಸ್ ಅವರ ಸಮಯೋಚಿತ ಶತಕದ ನೆರವಿನಿಂದ ಬಲಿಷ್ಠ ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ನಲ್ಲಿ ಮಣಿಸುವ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪ್ರವೇಶಿಸಿದೆ. ಮುಂಬೈನ ಡಿ.ವೈ. ಪಾಟೀಲ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಭಾರತದ ವನಿತೆಯರು 05 ವಿಕೆಟ್‌ನಿಂದ ಮಣಿಸಿದರು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯ 338 ರನ್‌ಗೆ ಆಲೌಟ್ ಆಗಿತ್ತು. 339 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. […]
ಅ.31, ನ.01ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅಕ್ಟೋಬರ್ 31 ಮತ್ತು ನವೆಂಬರ್ 01ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 31 ರಂದು ಮಧ್ಯಾಹ್ನ 03 ಗಂಟೆಗೆ ನಾಗರಹೊಳೆಯಲ್ಲಿ ಕೊಡಗು ಜಿಲ್ಲಾಡಳಿತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ‘ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಕಟ್ಟಡ ನವೀಕರಣ ಕಾಮಗಾರಿ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 05 ಗಂಟೆಗೆ ವಿರಾಜಪೇಟೆ […]
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅನು ಕಾರ್ಯಪ್ಪ ಅವಿರೋಧ ಆಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ ಅಧ್ಯಕ್ಷರಾಗಿ ಬಾಚರಣಿಯಂಡ ಅನು ಕಾರ್ಯಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಯಾಗಿ ಬೇರೆ ಯಾರೂ ಸ್ಪರ್ಧಿಸದ ಕಾರಣ ಅನು ಕಾರ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅನು ಕಾರ್ಯಪ್ಪ ಹಲವು ವರ್ಷದಿಂದ ಪತ್ರಿಕೋದ್ಯಮದಲ್ಲಿದ್ದು, ಪ್ರಸ್ತುತ ರಿಪಬ್ಲಿಕ್ ಕನ್ನಡ ವಾಹಿನಿಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ. ರಾಕೇಶ್, ಉಪಾಧ್ಯಕ್ಷರಾಗಿ ನವೀನ್ ಸುವರ್ಣ, ವನಿತಾ ಚಂದ್ರಮೋಹನ್, ಎ.ಎನ್.ವಾಸು, ಕಾರ್ಯದರ್ಶಿಗಳಾಗಿ ಪಬ್ಲಿಕ್ ಟಿವಿ ಮಲ್ಲಿಕಾರ್ಜುನ್, ರಿಜ್ವಾನ್ ಹುಸೇನ್, ಚೆರಿಯಮನೆ ಸುರೇಶ್ […]