ಯುವ ಒಕ್ಕೂಟ ವತಿಯಿಂದ ಭಾಗಮಂಡಲದಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆ.23ಕ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ಬೆಳಗ್ಗೆ […]
ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕುಶಾಲನಗರ ಸಮಿತಿ ರಚನೆ – ಅಧ್ಯಕ್ಷರಾಗಿ ಹೆಚ್.ಬಿ. ದಿನೇಶ್ ಚಾರಿ ಆಯ್ಕೆ

ಮಡಿಕೇರಿ : ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಕುಶಾಲನಗರ ತಾಲೂಕು ಸಮಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಹೆಚ್.ಬಿ. ದಿನೇಶ್ ಚಾರಿ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ವಿ. ಅಮೃತ ಅವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಶಾಂತಕುಮಾರ್, ಎನ್.ಕೆ. ಮಾಲಾದೇವಿ, ಸಹಕಾರ್ಯದರ್ಶಿಯಾಗಿ ರಮೇಶ್ ಕೆ.ಆರ್., ಕೋಶಾಧಿಕಾರಿಯಾಗಿ ಬರಮಣ್ಣ ಟಿ ಬೆಟ್ಟಗೇರಿ, ನಿರ್ದೇಶಕರಾಗಿ ಚಂದ್ರಶೇಖರ್ ಕೆ.ಎಸ್., ಎಸ್.ಎಸ್. ಅಂಕಿತಾ, ಮಂಜುನಾಥ್, ಪ್ರಕಾಶ್, ಶಿಲ್ಪ ಎಚ್.ಎಸ್., ದೀಪಿಕಾ ಎಮ್.ಎಸ್., ಬಸವರಾಜ್., ಮನು ಅವರನ್ನು ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಗೌರವ ಸಲಹೆಗಾರರಾಗಿ ಎಂ.ಎ. ರುಬೀನಾ […]
ಸಿ&ಡಿ ಜಾಗದ ಸಮಸ್ಯೆ – ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ವಸ್ತು ಸ್ಥಿತಿ ವಿವರಿಸಿದ ಶಾಸಕ ಡಾ. ಮಂತರ್ ಗೌಡ

ಬೆಂಗಳೂರು : ಕೊಡಗು ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಿ ಮತ್ತು ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಶಾಸಕ ಡಾ. ಮಂತರ್ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದ ಶಾಸಕರು, ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ವಿವರಿಸಿದರು. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶಾಸಕರು, ಜಿಲ್ಲೆಯ ರೈತರು ಕೃಷಿಕರ ಆತಂಕವನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೆಲವೊಂದು ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಕಾನೂನಾತ್ಮಕವಾಗಿಯೇ ಬಗೆಹರಿಸಬೇಕಾಗುತ್ತದೆ. ಈ ಎಲ್ಲಾ […]
ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಕೆ. ಹಂಸ ನೇಮಕ – ಶುಭಕೋರಿದ ಶಾಸಕ ಎ.ಎಸ್. ಪೊನ್ನಣ್ಣ

ಮಡಿಕೇರಿ : ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಕೆ. ಹಂಸ ನೇಮಕವಾಗಿದ್ದಾರೆ. ಚೆಟ್ಟಿಮಾನಿ ಗ್ರಾಮದ ಕುಂದಚೆರಿ ನಿವಾಸಿಯಾಗಿರುವ ಹಂಸ ಪಕ್ಷದಲ್ಲಿ ಸಕ್ರಿಯರಾಗಿದ್ದು, ನೂತನ ಜವಾಬ್ದಾರಿ ನೀಡಿ ಶಾಸಕ ಎ.ಎಸ್. ಪೊನ್ನಣ್ಣ ಆದೇಶಿಸಿದ್ದಾರೆ. ಕೊಡಗು ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪಟ್ಟಡ ರಕ್ಷಿತ್ ಚೆಂಗಪ್ಪ ಶಿಫಾರಸಿನ ಮೇರೆಗೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಅನುಮೋದನೆಯೊಂದಿಗೆ […]
ಸ್ವಾತಂತ್ರ್ಯೋತ್ಸವ ಅಂಗವಾಗಿ ಸುನ್ನಿ ಯುವಜನ ಸಂಘದ ವತಿಯಿಂದ ವೀರಾಜಪೇಟೆ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ

ವೀರಾಜಪೇಟೆ : ಸುನ್ನಿ ಯುವಜನ ಸಂಘ(ಎಸ್‌ವೈಎಸ್) ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವೀರಾಜಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವು ಮಾಡಿದರು. ಆವರಣದಲ್ಲಿದ್ದ ತ್ಯಾಜ್ಯಗಳನ್ನು ತೆರವುಗೊಳಿಸಿ ಪರಿಸರ ಶುಚಿತ್ವದ ಅರಿವು ಮೂಡಿಸಿದರು. ಈ ಕಾರ್ಯದಲ್ಲಿ ಎಸ್‌ವೈಎಸ್ ವೀರಾಜಪೇಟೆ ವೃತ್ತದ ಸದಸ್ಯರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಂಘಟನೆ ರಾಜ್ಯ ಸಮಿತಿ ಸದಸ್ಯ ಮುಖಂಡ ಅಹಮ್ಮದ್ ಮದನಿ, ನಮ್ಮ ಸುತ್ತಲಿನ ವಾತಾವರಣ ಸ್ವಚ್ಛತೆಯಿಂದ ಕೂಡಿರಬೇಕು. ಎಸ್‌ವೈಎಸ್ ವತಿಯಿಂದ ವಿವಿಧ ಸಂದರ್ಭದಲ್ಲಿ ಸಮಾಜಮುಖಿ […]
ವಿರಾಜಪೇಟೆ ಸ್ನೇಹಿತರ ಒಕ್ಕೂಟದಿಂದ ಹೆಗ್ಗಳ ಸರ್ಕಾರಿ ಶಾಲಾ ಮಕ್ಕಳಿಗೆ ಟೈ, ಬೆಲ್ಟ್ ವಿತರಣೆ

ಸ್ನೇಹಿತರ ಒಕ್ಕೂಟ ವಿರಾಜಪೇಟೆ (Virajpet) ವತಿಯಿಂದ ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸರಿಸುಮಾರು 25 ಮಕ್ಕಳಿಗೆ ಟೈ ,ಬೆಲ್ಟ್ ಹಾಗೂ ಶಿಕ್ಷಕರಿಗೆ ಟೇಬಲ್ ನೀಡುವ ಮೂಲಕ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿರುತ್ತಾರೆ ಇವರ ಈ ಕಾರ್ಯ ಸಾರ್ವಜನಿಕರಲ್ಲಿ ಉತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಸ್ನೇಹಿತರ ಒಕ್ಕೂಟ ಪ್ರಮುಖರಿಗೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕರೆಲ್ಲ ಸೇರಿ ತುಂಬು ಹೃದಯದ ಧನ್ಯವಾದಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರ ಒಕ್ಕೂಟ ಪ್ರಮುಖರಾದ […]
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ:- ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕøತಿ […]
ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀದರ ಶಿಕ್ಷಕರಿಗೆ ಸಂಬಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದಿದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಗ್ರಂಥಾಲಯಗಳು ಜ್ಞಾನಾರ್ಜನೆಯ ಪ್ರಮುಖ ತಾಣವಾಗಿದ್ದು. ಸಮಾಜದ ಪ್ರಗತಿಗೆ ಹಾಗೂ ಪ್ರತಿ ಓದುಗರ ಬೆಳವಣಿಗೆಗೆ ಗ್ರಂಥಾಲಯ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿರಾಜಪೇಟೆ (Virajpet) ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾದ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ 133 ನೇ ಜನ್ಮ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು ಪ್ರತಿವರ್ಷ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಮಾಡುತ್ತಾ ಬಂದಿದ್ದೇವೆ. ಇಂದಿನ ಡಿಜಿಟಲ್ ಯುಗದಲ್ಲಿಯೂ […]
C & D ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕರೆ ನೀಡಿರುವ ಸೋಮವಾರಪೇಟೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಸೋಮವಾರಪೇಟೆ : ಸಿ ಆಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಸೋಮವಾರಪೇಟೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಹೋರಾಟ ಸಮಿತಿಯು ತಾಲೂಕು ಬಂದ್‌ಗೆ ಕರೆ ನೀಡಿದ್ದು, ಸೋಮವಾರಪೇಟೆ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಇಲ್ಲಿನ ವಿವೇಕಾನಂದ ಸರ್ಕಲ್ ಬಳಿ ಸೇರಿದ ರೈತರು ವಾಹನ ಸಂಚಾರಕ್ಕೆ ತಡೆವೊಡ್ಡಿದರು. ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಅಂಗಡಿ ಮಳಿಗೆಗಳು ಬಂದ್ ಆಗಿವೆ. ಪ್ರತಿಭಟನೆ ವೇಳೆ ತಹಸೀಲ್ದಾರ್ ಕೃಷ್ಣಮೂರ್ತಿ, ಆರ್‌ಎಫ್‌ಒ ಶೈಲೇಂದ್ರ ಅವರನ್ನು ಸುತ್ತುವರೆದು ಆಕ್ರೋಶ […]