7.80 ಕೆಜಿ ಗಾಂಜಾ ಕೇರಳಕ್ಕೆ ಸಾಗಾಟ ಯತ್ನ – ಮಾಲು ಸಹಿತ ಆರೋಪಿಗಳು ವಶಕ್ಕೆ..!

ಮಡಿಕೇರಿ : ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೀರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಹುಣಸೂರಿನ ವಿಜಯನಗರದ ಅನೀಸ್ ಅಹಮದ್(45), ಹುಣಸೂರು ಪಟ್ಟಣದ ಸ್ಕೋರ್ ಬೀದಿ ನಿವಾಸಿ ಚೇತನ್(40) ಬಂಧಿತರು. ಗಾಂಜಾವನ್ನು ಕೇರಳಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ಮಾಡಿದ್ದಾರೆ. ಬಂಧಿತರಿಂದ 7 ಕೆಜಿ 872 ಗ್ರಾಂ ತೂಕದ(2,50,000 ರೂ. ಮೌಲ್ಯದ) ಗಾಂಜಾ, ಸ್ವಿಫ್ಟ್ ಕಾರು, ಒಂದು ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಪಡಿಸಲಾಗಿದೆ.    

ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆ.೧೨ಕ್ಕೆ

ಮಡಿಕೇರಿ : ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆಗಸ್ಟ್ ೧೨ ರಂದು ಬೆಳಗ್ಗೆ ೯ ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಲಿದೆ. ಪ್ರಾಧಿಕಾರದ ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.

ಜವಾಹರ್‌ ನವೋದಯ ವಿದ್ಯಾಲಯ ೧೧ ನೇ ತರಗತಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೫-೨೬ ನೇ ಸಾಲಿನ ಖಾಲಿ ಇರುವ ೧೧ ನೇ ತರಗತಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸಿಬಿಎಸ್‌ಇ ಅಥವಾ ಮಾನ್ಯತೆ ಪಡೆದ ರಾಜ್ಯ ಮಂಡಳಿಯಿAದ ಹತ್ತನೇ ತರಗತಿ ಪಾಸಾಗಿದ್ದು, ಕನಿಷ್ಠ ಶೇ.೬೦ ಅಂಕಗಳನ್ನು ಪಡೆದಿರಬೇಕು. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಕನಿಷ್ಠ ೬೦ ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಆನ್‌ಲೈನ್ ಮತ್ತು ಆಪ್‌ಲೈನ್ ಎರಡು ಮಾರ್ಗಗಳಲ್ಲಿ ಅವಕಾಶವಿದ್ದು, […]

ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಡಳಿತ ಮನವಿ – ಏನು ಮಾಡ್ಬೇಕು? ಏನು ಮಾಡ್ಬಾರ್ದು..? ಇಲ್ಲಿದೆ ನೋಡಿ ಗೈಡ್ಲೈನ್ಸ್

  ಮಡಿಕೇರಿ : ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿನಾಂಕ ೨೦-೦೭-೨೦೧೬ ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ […]

ಸಹಕಾರ ಸಚಿವ ಕೆ.ಎನ್.‌ ರಾಜಣ್ಣ ರಾಜೀನಾಮೆ – ಪಕ್ಷ ವಿರೋಧಿ ಹೇಳಿಕೆಗೆ ಬೆಲೆ ತೆತ್ತ ಸಚಿವ..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ.ಎನ್.‌ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮನೆ ನೀಡಿದ್ದಾರೆ. ಹೈಕಮಾಂಡ್‌ ಸೂಚನೆ ಮೇರೆಗೆ ಅವರು ರಾಜೀನಾಮೆ ನೀಡಿದ್ದಾರೆಂದು ತಿಳಿದು ಬಂದಿದೆ. ಕೆಲವು ದಿನದ ಹಿಂದೆ ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದರು. ಇದಕ್ಕೆ ವಿರುದ್ಧವಾಗಿ ರಾಜಣ್ಣ ತಮ್ಮ ಹೇಳಿಕೆ ನೀಡಿದ್ದರು. ಇದು ಹೈಕಮಾಂಡ್‌ ನಾಯಕರನ್ನು ಕೆರಳಿಸಿತ್ತು. ತಕ್ಷಣ ಅವರಿಂದ ರಾಜೀನಾಮೆ ಪಡೆಯವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರಿಷ್ಠರು ಸೂಚಿದ್ದರು. ಅದರ […]

ನವೆಂಬರ್ 18-20ರವರೆಗೆ ಬೆಂಗಳೂರು ಟೆಕ್ ಸಮ್ಮಿತ್-2025 : ಕಂಪನಿಗಳ ಪ್ರಮುಖರೊಂದಿಗೆ ಸಿಎಂ Breakfast Meet

ಬೆಂಗಳೂರು : ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ CEOಗಳ ಜೊತೆ Breakfast Meetನಲ್ಲಿ ಪಾಲ್ಗೊಂಡರು. DCM ಡಿ.ಕೆ.ಶಿವಕುಮಾರ್, ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. “Futurise” “ಭವಿಷ್ಯೋದಯ” ಧ್ಯೇಯವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿದಲಾಗುತ್ತಿದೆ.

ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ – ಪ್ರಯಾಣಿಕನಿಗೆ ಗಂಭೀರ ಗಾಯ..!

ಗೋಣಿಕೊಪ್ಪ : ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನದಿಂದ ಕಾಡಾನೆಗಳ ದಾಳಿ ಮಿತಿಮೀರಿದೆ. ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದ್ದು, ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂಜಿಲಗೆರೆಯಲ್ಲಿ ನಡೆದಿದೆ. ಆಟೋ ರಿಕ್ಷಾ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ತೋಟದಿಂದ ಏಕಾಏಕಿ ಬಂದ ಕಾಡಾನೆ ದಾಳಿ ಮಾಡಿದೆ. ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರಾಗಿದ್ದರೆ, ರಿಕ್ಷಾದಲ್ಲಿದ್ದ ಪ್ರಯಾಣಿಕ ಪ್ರದೀಪ್‌ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ […]

ಉದ್ಯಮಿ ಅಜ್ಜಿನಂಡ ಗಣೇಶ್‌ ಅಯ್ಯಣ್ಣ ನಿಧನ…

ಮಡಿಕೇರಿ : ಉದ್ಯಮಿ ಅಜ್ಜಿನಂಡ ಗಣೇಶ್ ಅಯ್ಯಣ್ಣ(68) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಟ್ರಸ್ಟಿ ಆಗಿದ್ದರು. ಕಾಲೇಜು ರಸ್ತೆಯಲ್ಲಿ ಅಂಬಿಕಾ ವಿಡಿಯೋ ಶಾಪ್ ಹೊಂದಿದ್ದರು. ಮೃತರಿಗೆ ಪತ್ನಿ, ಸಾಮಾಜಿಕ ಕಾರ್ಯಕರ್ತೆ ಮೋಂತಿ ಗಣೇಶ್, ಮೂವರು ಮಕ್ಕಳು ಇದ್ದಾರೆ. ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಕೊಡವ ಸಮಾಜ ರುದ್ರ ಭೂಮಿಯಲ್ಲಿ ನಡೆಯಲಿದೆ.

ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ: ಎ.ಎಸ್.ಪೊನ್ನಣ್ಣ

Kodava culture

ಮಡಿಕೇರಿ:- ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕøತಿ ಮತ್ತು ಕ್ರೀಡಾ ಅಸೋಷಿಯೇಷನ್ ಇವರ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಗುರುವಾರ […]

ಕುಶಾಲನಗರದಲ್ಲಿ ಸ್ತನ್ಯಪಾನ ಸಪ್ತಾಹ – ಸೊಪ್ಪಿನ ರಸಗಳನ್ನು ಮಕ್ಕಳಿಗೆ ಕುಡಿಸಬೇಡಿ – ಕರೆ ನೀಡಿದ ಪ್ರಮುಖರು

ಕುಶಾಲನಗರ : ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರದ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಇಂದುಧರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ಸಂಪೂರ್ಣವಾಗಿ ತಿಳಿದಿರುವುದಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಿ ತಾಯಂದಿರನ್ನು ಹಾಲುಣಿಸಲು ಪ್ರೇರೇಪಿಸಲು ಮತ್ತು ತಾಯಿ ಮತ್ತು ಮಗುವಿಗೆ ಆಗುವ ಪ್ರಯೋಜನವನ್ನು ಉತ್ತೇಜಿಸಲು ಸಪ್ತಾಹವನ್ನು ಆಚರಿಸಲಾಗುತ್ತದೆ. ಇದು ಕೇವಲ ಒಂದು ವಾರದ ಆಚರಣೆಯಾಗಬಾರದು. ಪ್ರತಿ […]