ಉಚಿತ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ..! – ಕುಶಾಲನಗರದಲ್ಲಿ ಅಧಿಕಾರಿಗಳ ದಾಳಿ – ದೊಡ್ಡ ದಂಧೆಯ ಶಂಕೆ.!

ಕುಶಾಲನಗರ : ನ್ಯಾಯಬೆಲೆ ಅಂಗಡಿಯಲ್ಲಿ ಸಿಕ್ಕ ಅಕ್ಕಿಯನ್ನ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಕುಶಾಲನಗರದಲ್ಲಿ (Kushalnagar) ಬೆಳಕಿಗೆ ಬಂದಿದೆ. ಪೂರಕ ಮಾಹಿತಿ ಹಿನ್ನೆಲೆಯಲ್ಲಿ ಬೆಳಗ್ಗೆ ಕಾರ್ಯಾಚರಣೆ ಕೈಗೊಂಡ ತಾಲೂಕು ಆಹಾರ ನಿರೀಕ್ಷಕಿ ಎಂ.ಎಸ್. ಸ್ವಾಮಿ ನೇತೃತ್ವದ ತಂಡ ಅಕ್ಕಿ ಮಾರಾಟ ದಂಧೆಯನ್ನು ಬಯಲಿಗೆಳೆದಿದೆ. ವ್ಯಕ್ತಿಯೊಬ್ಬ ಮನೆ ಮನೆಗೆ ತೆರಳಿ ಅಕ್ಕಿ ಸಂಗ್ರಹಿಸಿ ಅದನ್ನು ಬೇರೆಡೆ ಕೊಂಡೊಯ್ದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಸುಂದರ ನಗರದಲ್ಲಿ ಮನೆಗಳಿಂದ ಅಕ್ಕಿ ಸಂಗ್ರಹಿಸುವ ವೇಳೆ ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ […]
Kodagu: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 60.87 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2132.17 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2174.42 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.80 ಮಿ.ಮೀ. ಕಳೆದ ವರ್ಷ ಇದೇ ದಿನ 101.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3197.72 ಮಿ.ಮೀ, ಕಳೆದ ವರ್ಷ […]
ಮಾಲೆಗಾಂವ್ ಸ್ಪೋಟ ಪ್ರಕರಣ – ತೀರ್ಪು ಪ್ರಕಟಿಸಿದ ಮುಂಬೈ NIA ಕೋರ್ಟ್ – ಎಲ್ಲಾ 07 ಆರೋಪಿಗಳು ದೋಷಮುಕ್ತ..!

ಮುಂಬೈ : ಮಾಲೆಗಾಂವ್ ಸ್ಪೋಟಕ್ಕೆ (Malegaon blast) ಸಂಬಂಧಿಸಿದಂತೆ ಮುಂಬೈನ ಎನ್‌ಐಇ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಎಲ್ಲಾ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿನ ಮಸೀದಿ ಬಳಿ 2008ರ ಸೆಪ್ಟೆಂಬರ್ 29 ರಂದು ಬಾಂಬ್ ಸ್ಪೋಟವಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿರುವ ನ್ಯಾಯಾಲಯ 07 ಆರೋಪಿಗಳ ವಿರುದ್ಧ ಅರೋಪ ಸಾಬೀತಾಗದ ಹಿನ್ನೆಲೆಯಲ್ಲಿ ನಿರ್ದೋಷಿಗಳೆಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್(ನಿವೃತ್ತ), […]
ಮಹಿಳೆ ಮೇಲೆ ಅ*ತ್ಯಾಚಾರ ಪ್ರಕರಣ – ನಾಳೆ ತೀರ್ಪು ಪ್ರಕಟಿಸಲಿರುವ ನ್ಯಾಯಾಲಯ – ಏನಾಗಲಿದೆ ಪ್ರಜ್ವಲ್ ರೇವಣ್ಣ ಭವಿಷ್ಯ..!

ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬೇಲ್ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ(ಆ.01) ತೀರ್ಪು ಪ್ರಕಟಿಸಲಿದೆ. ವಿಚಾರಣೆ ಮುಕ್ತಾಯವಾಗಿ ಜುಲೈ 30ರಂದು ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಕೆಲವು ಸ್ಪಷ್ಟೀಕರಣ ಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆಗಸ್ಟ್ 1ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಸರ್ಕಾರದ ಪರ ಎಪಿಪಿ ಜಗದೀಶ್, […]
ಕೊಡಗು ಜಿಲ್ಲೆಯ ಮಳೆ ವಿವರ: ಇನ್ನೆಷ್ಟು ದಿನ ಮಳೆ ಅಬ್ಬರಿಸಲಿದೆ?

ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.66 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 117.40 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2116.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2113.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.10 ಮಿ.ಮೀ. ಕಳೆದ ವರ್ಷ ಇದೇ ದಿನ 180.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3165.92 ಮಿ.ಮೀ, ಕಳೆದ ವರ್ಷ […]
ವಿರಾಜಪೇಟೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಕಾರು ವಿರಾಜಪೇಟೆ ಕಾವೇರಿ ಕಾಲೇಜಿನ ಸಮೀಪ ತಿರುವಿನಲ್ಲಿ ಅಪಘಾತಕ್ಕೀಡಾಗಿದ್ದು ಜಿಲ್ಲಾಧ್ಯಕ್ಷರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂತಾರಾಷ್ಟ್ರೀಯ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿ: ಕೊಡಗಿನ ತಂಡಕ್ಕೆ ಚಿನ್ನ

ಕೇರಳದ ತಿರುವನಂತಪುರಂನಲ್ಲಿ ನಡೆದ ಸ್ಟಿಫನ್ ಜಾಕೋಬ್ ಕೋಶಿ ಅಂತಾರಾರಾಷ್ಟ್ರೀಯ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾರತೀಯ ಟೆಕ್ ಸಿಲ್ಕೋ ತಂಡವನ್ನು ಪ್ರತಿನಿಧಿಸಿದ್ದ ಕೊಡಗಿನ ಹಿರಿಯ ಬಾಸ್ಕೆಟ್ ಬಾಲ್ ತಂಡ ಮೂರು ಚಿನ್ನದ ಪದಕ ಗೆದ್ದಿದ್ದಾರೆ. 55 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಒಂದು, 60 ವರ್ಷ ಮೇಲ್ಪಟ್ಟದ ತಂಡದಲ್ಲಿ ಒಂದು ಮತ್ತು 65 ವರ್ಷ ಮೇಲ್ಪಟ್ಟ ತಂಡದಲ್ಲಿ ಒಂದು ಚಿನ್ನದ ಪದಕ ಬಾಚಿಕೊಂಡಿದ್ದಾರೆ.
ಇಂಜಲಗೆರೆಯ ಕಾಫಿ ತೋಟದಲ್ಲಿ ವ್ಯಾಘ್ರನ ಹೆಜ್ಜೆ ಗುರುತು ಪತ್ತೆ – ಆತಂಕದಲ್ಲಿ ಗ್ರಾಮಸ್ಥರು..!

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಒಂದೆಡೆ ಕಾಡಾನೆ ಉಪಟಳ ನಿರಂತರವೆಂಬಂತಾಗಿದೆ. ಈ ನಡುವೆ ಅಲ್ಲಲ್ಲಿ ಹುಲಿಗಳ ದರ್ಶನವಾಗುತ್ತಿದ್ದು, ಅರಣ್ಯದಂಚಿನ ಜನರ ನಿದ್ದೆಗೆಡಿಸಿದೆ. ಇಂಜಲಗೆರೆ ಗ್ರಾಮದಲ್ಲಿ ಹುಲಿಯ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಗ್ರಾಮದ ಮಂಡೇಪಂಡ ಪ್ರವೀಣ್ ಬೋಪಯ್ಯ ಅವರ ಕಾಫಿ ತೋಟದಲ್ಲಿ ಮಂಗಳವಾರ ಹೆಜ್ಜೆಗುರುತು ಕಂಡಿದೆ. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೆಲವು ದಿನದ ಹಿಂದೆ ಸಿದ್ದಾಪುರ ಬಳಿಯ ಕರಡಿಗೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿತ್ತು. ಬಾಣಂಗಾಲ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿಗೆ ಜಾನುವಾರು ಮೃತಪಟ್ಟಿದ್ದವು. […]
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ: ಹೋಂಸ್ಟೇ ಅಭಿವೃದ್ಧಿಗೆ ಸಹಾಯಧನ

ಮಡಿಕೇರಿ:- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ (DA-JGUA) ಮತ್ತು ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನ (PM-JUGA)ದ ಅಧೀನದಲ್ಲಿ, ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ಯೋಜನೆಯ ಉಪಯೋಜನೆಯಾಗಿ ಆದಿವಾಸಿ ಪ್ರದೇಶಗಳಲ್ಲಿ ಹೋಂಸ್ಟೇ (Homestay) ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದ್ದು, ಈ ಯೋಜನೆಯ ಉದ್ದೇಶ, ಪರಿಶಿಷ್ಟ ಪಂಗಡದ ಬುಡಕಟ್ಟು/ಅದಿವಾಸಿ ಸಮುದಾಯವಿರುವ ಗ್ರಾಮಗಳಲ್ಲಿ ಅತಿಥ್ಯಾಧಾರಿತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ಸ್ಥಳೀಯ ಜನರಿಗೆ ಖಾಯಂ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವುದು ಮತ್ತು ಬುಡಕಟ್ಟು/ ಆದಿವಾಸಿ ಸಮುದಾಯದ […]
ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ತಮ್ಮಯ್ಯಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ ಚಂದ್ ಗೊಹ್ಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ನೆಲೆಯಲ್ಲಿ […]