ಕೊಡಗಿನ ಹುಡುಗನ ಜೊತೆ ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್‌!

Anchor Anushree

ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ (Anchor Anushree) ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಕೇಳುಬರುತ್ತಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ. ಕೊಡಗು ಮೂಲದ ರೋಷನ್ ಎಂಬುವವರೊಂದಿಗೆ ಅವರ ವಿವಾಹ ಆಗಸ್ಟ್ 28 ರಂದು ನಡೆಯಲಿದೆ ಎನ್ನಲಾಗಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ. ಮಂಗಳೂರಿನ ಸುರತ್ಕಲ್ ಮೂಲದ ಅನುಶ್ರೀ, ತಮ್ಮ ಚುರುಕಾದ ನಿರೂಪಣೆಯಿಂದ ಕನ್ನಡ ಕಿರುತೆರೆಯಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಬಿಗ್ ಬಾಸ್ […]

ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

Kodagu Journalists Association

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಕುಶಾಲನಗರ ತಾಲೂಕು ಘಟಕದಲ್ಲಿ ಕೊಡವಂಡ ವಸಂತಿ ಪೊನ್ನಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದು, ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.24 ಸಾವಿರ ಮೊತ್ತದ ಚೆಕ್ ಅನ್ನು ಗುರುವಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ. ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ. ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.

Power Cut: ನಾಳೆ ಕೊಡಗಿನಲ್ಲಿ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ!

Power Cut

ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ತೆಲುಗರ ಬೀದಿ, ಸುಂಕದ ಕಟ್ಟೆ, ಅಪ್ಪಯ್ಯಸ್ವಾಮಿ ರಸ್ತೆ, ಕುಕ್ಲೂರು, ಕಾಕೋಟುಪರಂಬು, ಬೇತ್ರಿ, ಕೆದಮುಳ್ಳೂರು, ಪಾಲಂಗಾಲ, ಕೊಟ್ಟೋಳಿ, ಬೋಯಿಕೇರಿ, ಕದನೂರು, ಮೈತಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]

ಯುವನಿಧಿ ಯೋಜನೆ: ಯಾರೆಲ್ಲಾ ಅರ್ಹ? ಅರ್ಜಿ ಸಲ್ಲಿಸೋದು ಹೇಗೆ?

Yuvanidhi Yojana

ಮಡಿಕೇರಿ:- ಯುವನಿಧಿ ಯೋಜನೆಯಡಿ (Yuvanidhi Yojana) ಅರ್ಜಿ ಸಲ್ಲಿಸದ ಅರ್ಹರ ಅನುಕೂಲಕ್ಕಾಗಿ ಜುಲೈ, 07 ರಿಂದ ಆಗಸ್ಟ್, 07 ರವರೆಗೆ ವಿಶೇಷ ನೋಂದಣಿ ಅಭಿಯಾನ (Campaign) ನಡೆಯಲಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್‍ಲೈನ್‍ನಲ್ಲಿ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005997154 ಗೆ ಕರೆ ಮಾಡುವ ಮೂಲಕ ಅಥವಾ […]

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಕೊಡೆ ವಿತರಣೆ

Sri Muthappan Malayali Samaj

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ 17ನೇ ವರ್ಷದ ಸ್ಥಾಪನ ದಿನ ಅಂಗವಾಗಿ ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಕೆದಮುಳ್ಳೂರಿನ ಕಥರಿನ ಚಿತ್ತದಿನಿ ಮಕ್ಕಳ ಮನೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಛತ್ರಿಯನ್ನು ವಿತರಿಸಲಾಗಿದೆ. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರಾದ ಸುಮೇಶ್ ರವರ ನೇತ್ರತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗಿದೆ.

ಗುಡ್ಡೆಹೊಸೂರುವಿನಲ್ಲಿ ಲಾರಿ ಹರಿದು ವ್ಯಕ್ತಿ ಸಾವು

Guddehosuru

ಇಂದು ಬೆಳಗ್ಗಿನ ಜಾವ ಲಾರಿಯೊಂದು ವ್ಯಕ್ತಿ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಡ್ಡೆಹೊಸೂರುವಿನಲ್ಲಿ ನಡೆದಿದೆ. ಮೃತನನ್ನು ನಾಪೋಕ್ಲು ಸಮೀಪದ ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿಯಿಂದ ಹೆದ್ದಾರಿ ಬದಿಯಲ್ಲೇ ಅಡ್ಡಾಡುತ್ತಿದ್ದ ಎನ್ನಲಾಗಿದ್ದು, ಇಂದು ಬೆಳಿಗ್ಗೆ ಮೈಸೂರಿನತ್ತ ತೆರಳುತ್ತಿದ್ದ ಲಾರಿ (Truck) ಹರಿದು ಮೃತಾಪಟ್ಟಿದ್ದಾನೆ. ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ

government school

ಇಂದು ಸ. ಕಿ. ಪ್ರಾ. ಹೆಗ್ಗಳ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ ನಡೆಯಿತು. ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗುತ್ತದೆ. ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿಯನ್ನು ವಹಿಸಲಾಗಿದೆ. ಪ್ರಧಾನ ಮಂತ್ರಿ, ಶಿಕ್ಷಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.

Power Cut: ನಾಳೆ ಕೊಡಗಿನಲ್ಲಿ ಹಲವೆಡೆ ಕರೆಂಟ್ ಇರಲ್ಲ: ಎಲ್ಲೆಲ್ಲಿ ಗೊತ್ತಾ?

Power Cut

ವಿರಾಜಪೇಟೆ (Virajpet) 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆಎಸ್‍ಆರ್‍ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಗೋಣಿಕೊಪ್ಪ ರಸ್ತೆ, ಪಂಜರಪೇಟೆ, ವಿದ್ಯಾನಗರ, ಕೆಎಸ್‍ಆರ್‍ಟಿಸಿ, ಶಾಂತಿನಗರ, ಸುಭಾಶ್‍ನಗರ, ಮೀನುಪೇಟೆ, ಹೆಗ್ಗಳ, ಬೇಟೋಳಿ, ಆರ್ಜಿ, ರಾಮನಗರ, ತೋರ, ಬೂದಿಮಾಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]

ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಅಕ್ರಮ ರೆಸಾರ್ಟ್‌ – ನೆಲಸಮಗೊಳಿಸಲು ಪರಿಸರ ಪ್ರೇಮಿಗಳ ಆಗ್ರಹ..!

Environmentalists

ಮಡಿಕೇರಿ: ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಭೂ ಕುಸಿತ ಪ್ರದೇಶಗಳಲ್ಲಿ ನಿರ್ಮಾಣ ಮಾಡಿರುವ ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ನೆಲಸಮಗೊಳಿಸಬೇಕು ಎಂದು ಪರಿಸರವಾದಿ (Environmentalist) ಕರ್ನಲ್ ಸಿ.ಪಿ.ಮುತ್ತಣ್ಣ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಡಗಿನಲ್ಲಿ ತೋಟ, ಜಮ್ಮಾ ಬಾಣೆ ಮತ್ತು ಜೌಗು ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗೆ ಪರಿವರ್ತಿಸುವುದನ್ನು ನಿಷೇಧಿಸುತ್ತದೆ. ಅಲ್ಲದೇ, ಭೂ ಪರಿವರ್ತನೆಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾದಲ್ಲಿ ಅದನ್ನು ಪರಿಶೀಲಿಸಲು ಮತ್ತು ಭೂ ಕುಸಿತ ಪೀಡಿತ ಪ್ರದೇಶಗಳಲ್ಲಿ ಪರಿವರ್ತನೆಗಳಿಗೆ ಅನುಮತಿ ನಿರಾಕರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸುವ ಆದೇಶ ಹೊರಡಿಸಿತ್ತು. ಆದರೆ, […]

26 ಕಿ.ಮೀ ಮೈಲೇಜ್, 7-ಸೀಟರ್, 8 ಲಕ್ಷ ಬೆಲೆ: ಈ ಮಾರುತಿ ಕಾರಿನ ಖರೀದಿಗೆ ಮುಗಿಬಿದ್ದ ಗ್ರಾಹಕರು

Maruti Suzuki Ertiga

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಪ್ರಮುಖ ಎಂಪಿವಿಯಾಗಿದ್ದು, ಇದು ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿದೆ. ದೊಡ್ಡ ಕುಟುಂಬಗಳಿಗೂ ಹೆಚ್ಚು ಸೂಕ್ತವಾಗಿದ ಈ ಕಾರು ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾಮುಂದು – ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಜೂನ್ ತಿಂಗಳ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲೂ ಇದೇ ಎರ್ಟಿಗಾ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಈ 14,151 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ ಜೂನ್ ತಿಂಗಳಲ್ಲಿ […]