ನಟಿ ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದಿದ್ದೇಕೆ ‘ಸಂಜು ವೆಡ್ಸ್ ಗೀತಾ’ ಟೀಂ?

ನಟಿ ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಬಿಡುಗಡೆ ಆಯಿತು. ಆದರೆ ರಚಿತಾ ರಾಮ್ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದೆ. ಇದರ ನಿರ್ಮಾಪಕ ಛಲವಾದಿ ಕುಮಾರ್ ರಚಿತಾ ರಾಮ್ (Rachitha ram) ವಿರುದ್ದ ದೂರು ನೀಡಿದ್ದಾರೆ, ನಟಿಯ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ‘ಚಿತ್ರತಂಡಕ್ಕೆ ರಚಿತಾ ರಾಮ್ ದ್ರೋಹ […]
ಎಷ್ಟು ದಿನಗಳಿಗೊಮ್ಮೆ ಹಲ್ಲುಜ್ಜುವ ಬ್ರಷ್ ಬದಲಾಯಿಸಬೇಕು ಗೊತ್ತಾ?

ದೈನಂದಿನ ಚಟುವಟಿಕೆಯಲ್ಲಿ ಒಂದು ಬೆಳಗ್ಗೆ ಎದ್ದ ತಕ್ಷಣ ಹಾಗೂ ರಾತ್ರಿ ಮಲಗುವ ಮುನ್ನ ಬ್ರಷ್ ಮಾಡುವುದು, ಆದ್ರೆ ಕೆಲವರು ಒಂದೇ ಬ್ರಷ್‌ನಲ್ಲಿ ಹಲ್ಲುಜ್ಜುವ ವರ್ಷವಾದ್ರು ಒಂದೇ ಬ್ರಷ್‌ನಲ್ಲಿ ಹಲ್ಲುಜ್ಜುತ್ತಾರೆ. ಇದರಿಂದ ಒಳ್ಳೆಯದಕ್ಕಿಂತ ಅಪಾಯವೇ ಜಾಸ್ತಿ ಹಲ್ಲುಜ್ಜುವ ಬ್ರಷ್‌ಗೆ ಅದರದೆ ಆದ ಟೈಮ್ ಇರುತ್ತೆ. ಇಂತಿಷ್ಟು ಸಮಯಗಳಿಗೊಮ್ಮೆ ಹಲ್ಲುಜ್ಜುವ ಬ್ರಷನ್ನು ಬದಲಾಯಿಸಲೇಬೇಕು .ಹಾಗದ್ರೆ ಬ್ರಷನ್ನು ಎಷ್ಟು ಸಮಯಕ್ಕೊಮ್ಮೆ ಬದಲಾಯಿಸಬೇಕು? ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಟೂತ್ ಬ್ರಷ್‌ಗಳು (toothbrush) ಮುಖ್ಯ ಪಾತ್ರ ವಹಿಸುತ್ತವೆ. ಈಗಿನ ಕಾಲದಲ್ಲಿ ಎಲ್ಲಾರು ಟೂತ್ ಬ್ರಷ್‌ನ್ನೆ […]
ಜಲಪ್ರವಾಹ : ಚೇರಂಬಾಣೆ ಗ್ರಾಮಸ್ಥರ ಸಂಚಾರಕ್ಕೆ ಕೇವಲ ದೋಣಿ ಆಶ್ರಯ

ಚೇರಂಬಾಣೆ (cherambane) ದೋಣಿ ಕಾಡುವಿನಲ್ಲಿ ಪ್ರವಾಹ ಸ್ಥಳೀಯರಿಗೆ ಸಂಚರಿಸಲು ದೋಣಿ ವ್ಯವಸ್ಥೆ.ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಗಿನ್ನಿಸ್ ವಿಶ್ವ ದಾಖಲೆಗೆ ಸಜ್ಜಾದ ಮದೆನಾಡಿನ ಸಿಂಚನಾ..!

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಕೊಡಗಿನ ಯುವ ಯೋಗಪಟು ಮದೆನಾಡಿನ ಸಿಂಚನಾಳ (Sinchana) ಯೋಗ ಪ್ರದರ್ಶನವನ್ನು ಗಿನ್ನಿಸ್ ವಿಶ್ವದಾಖಲೆಗೆ ಸೇರ್ಪಡೆ ಮಾಡುವ ಕಾರ್ಯಕ್ರಮ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು (International yoga day ) ಮಡಿಕೇರಿಯಲ್ಲಿ ಆಯೋಜಿತವಾಗಿದೆ. ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ಜೂನ್ 21 ರಂದು ಶನಿವಾರ ಸಂಜೆ 6.30 ಗಂಟೆಗೆ ಸಿಂಚನಾಳ ಯೋಗಪ್ರದರ್ಶನವಿರಲಿದೆ.30 ನಿಮಿಷ 5 ಸೆಕೆಂಡ್ ಕಾಲ ಸಿಂಚನಾ ಡಿಂಬಾಸನ ಯೋಗ ಭಂಗಿಯಲ್ಲಿರುವ […]
ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್ ರೈ..

ಮಡಿಕೇರಿ : ದೆಹಲಿಯಲ್ಲಿ(Delhi) ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಮೂರ್ನಾಡುವಿನ ಯಶಸ್ ರೈ(Yashas Rai) ಆಯ್ಕೆಯಾಗಿದ್ದಾರೆ. 15ರಿಂದ 28 ವರ್ಷದೊಳಗಿನವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು. ನೆಹರು ಯುವ ಕೇಂದ್ರದ ಮೈ ಭಾರತ್ ಪೋರ್ಟಲ್ ಮೂಲಕ ಈ ಆಯ್ಕೆ ನಡೆದಿದೆ. ದೇಶಾದ್ಯಂತ ಸಹಸ್ರಾರು ಮಂದಿ ಯುವಕರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಆಯ್ಕೆಯಾಗಿದ್ದಾರೆ. ಯಶಸ್ ರೈ ಮೂರ್ನಾಡುವಿನ ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 75.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 989.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 496.42 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 122.45 ಮಿ.ಮೀ. ಕಳೆದ ವರ್ಷ ಇದೇ ದಿನ 9.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1505.52 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 688.64 […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ…

ಕೊಡಗು (Kodagu) ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 12.14 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.06 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 807.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 476.25 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.22 ಮಿ.ಮೀ. ಕಳೆದ ವರ್ಷ ಇದೇ ದಿನ 8.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1210.02 ಮಿ.ಮೀ, ಕಳೆದ ವರ್ಷ ಇದೇ […]
ದುರಂತ ಅಂತ್ಯ ಕಂಡ ಏರ್ ಇಂಡಿಯಾದ ಬೋಯಿಂಗ್-787 ವಿಶೇಷತೆ ಏನೇನು?

ಗುರುವಾರದಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ (Air India) ಬೋಯಿಂಗ್-787 ಡ್ರೀಮ್‌ಲೈನರ್ ವಿಮಾನ (Boeing 787 Dreamliner) ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. 672 ಅಡಿ ಎತ್ತರದಿಂದ ಮೆಡಿಕಲ್ ಹಾಸ್ಟೆಲ್ ಮೇಲೆ ಬಂದು ಅಪ್ಪಳಿಸಿದೆ. ಈ ಅಪಘಾತದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದಾರೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಮಧ್ಯಾಹ್ನ 1:38ಕ್ಕೆ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿತು. ಪೈಲಟ್ “ಮೇಡೇ” […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮೂರ್ನಾಡು 66 ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಗೊಳ್ಳಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪಕೇಂದ್ರದ 11ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಲಾಗುವುದು. ಆದ್ದರಿಂದ ಜೂನ್ 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ […]
ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ […]