ತೆಳುವಾದ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್56 ಬಿಡುಗಡೆ: ಬೆಲೆ ಎಷ್ಟು?

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ಇದೀಗ ಎಫ್-ಸೀರೀಸ್‌ನ ಅತಿ ತೆಳುವಾದ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ ಎಫ್56 5ಜಿ (Samsung Galaxy F56 5G) ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಫೋನ್ ಕೇವಲ 7.2 ಮಿಮೀನಷ್ಟು ತೆಳುವಾಗಿದ್ದು, ಅತ್ಯುತ್ತಮ ಕ್ಯಾಮೆರಾ, 6 ಜನರೇಷನ್ ಆಂಡ್ರಾಯ್ಡ್ ಅಪ್‌ಗ್ರೇಡ್, ಗೊರಿಲ್ಲಾ ಗ್ಲಾಸ್ ವಿಕ್ಟಸ್+ ಪ್ರೊಟೆಕ್ಷನ್ ಮತ್ತು ಅತ್ಯಾಧುನಿಕ ಎಐ ಎಡಿಟಿಂಗ್ ಟೂಲ್ ಗಳಂತಹ ವಿಭಾಗ ಶ್ರೇಷ್ಠ ವಿಶಿಷ್ಟ ಫೀಚರ್ ಗಳನ್ನು ಹೊಂದಿದೆ. ಈ ಕುರಿತು […]
ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟದಲ್ಲಿ ಕೆ.ಎಂ. ಹಸ್ಸನ್‌ಗೆ ಕಂಚಿನ ಪದಕ

ಪ್ಯಾರಾ ಟೆನ್ಪಿನ್ ಬೌಲಿಂಗ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ದಿನಾಂಕ 05/05/2025 ರಿಂದ 07/05/2025 ರವರೆಗೆ ಬೆಂಗಳೂರುನಲ್ಲಿ ನಡೆದ 5ನೇ ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟದಲ್ಲಿ ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕು ಅರೆಕಾಡು ಗ್ರಾಮದ ವಿಶೇಷಚೇತನರಾದ ಕೆ.ಎಂ. ಹಸ್ಸನ್ (Hassan) ಅವರಿಗೆ ಕಂಚಿನ ಪದಕ ದೊರೆತಿದೆ.
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇದರ ಬೆನ್ನಲ್ಲೇ ಕೊಹ್ಲಿ ಕೂಡ ಅದೇ ನಿ ನಿರ್ಧಾರ ತೆಗೆದುಕೊಂಡಿದ್ದಾರೆ. 2011 ರಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ಕಿಂಗ್ ಕೊಹ್ಲಿ 2019 ರವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಸರಾಸರಿ 54ರಲ್ಲಿ, 27 ಶತಕಗಳನ್ನು ಗಳಿಸಿದ್ದರು. ಆದರೆ 2020 ರ ನಂತರ ಬ್ಯಾಟಿಂಗ್ ನಿಧಾನವಾಯಿತು. […]
ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ (Bhagamandala) ಸಂಪರ್ಕಿಸುವ ಮಡಿಕೇರಿ (Madikeri) ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣ (A. S. Ponnanna) ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು. ದಿನವೊಂದಕ್ಕೆ ಸಾವಿರಾರು ಭಕ್ತಾದಿಗಳು ಹಾಗೂ […]
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ವಿಚಾರಣೆಗೆ ಹಾಜರಾದ ತೆನ್ನಿರ ಮೈನಾ

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಕೊಡಗು ಮೂಲದ ಬಿಜೆಇಪ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ (Thennira Maheena) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗಲು ಬೆಂಗಳೂರಿನ ಹೆಣ್ಣೂರು ಪೊಲೀಸರು ನೊಟೀಸ್ ನೀಡಿದ್ದರು. ಅದರಂತೆ ಠಾಣೆಯ ಇನ್ಸ್‌ಪೆಕ್ಟರ್ ಎದುರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಕೊಡಗು ಮೂಲದ ವಿನಯ್ ಸೋಮಯ್ಯ ನವರು ಏಪ್ರಿಲ್ 4 ರಂದು ಮುಂಜಾನೆ ನಾಗವಾರದದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ […]
ಮುಂಗಾರಿಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ವಹಿಸಿ: ಜಿಲ್ಲಾಧಿಕಾರಿ

ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, […]
ಅಮೃತ ಯುವ ಮೊಗೇರ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯ

ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ಇವರ ವತಿಯಿಂದ ತೃತೀಯ ಬಾರಿಗೆ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ (Mogera cricket) ಪಂದ್ಯವು ಮೇ 17 ಹಾಗೂ18 ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ. ಮೊಗೇರ ಬಾಂಧವರಿಗೆ ಮಾತ್ರ ಅವಕಾಶ ಇದ್ದು ಒಟ್ಟು 40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಪಂದ್ಯದ ಶುಲ್ಕ 3,000 ನಿಗದಿ ಪಡಿಸಲಾಗಿದ್ದು ಕ್ರೀಡಾ ಕೂಟದ ವಿನ್ನರ್ಸ್ ತಂಡಕ್ಕೆ 33,333 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22,222 ನಗದು […]
IPL 2025: ಐಪಿಎಲ್ ಟೂರ್ನಿ ರದ್ದು, ಯಾವಾಗ ನಡೆಯಲಿದೆ ದ್ವಿತೀಯಾರ್ಧ?

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್ ಪ್ರಿಮಿಯರ್ ಲೀಗ್ (IPL) 2025 ಪಂದ್ಯಾವಳಿಯನ್ನು ಬಿಸಿಸಿಐ ರದ್ದುಗೊಳಿಸಲಾಗಿದೆ. ಆಟಗಾರರು, ಪ್ರಾಂಚೈಸಿ, ಅಭಿಮಾನಿಗಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಇಂದು (ಮೇ 9) ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿಮ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಒಟ್ಟು 9 ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಮೇಲೆ, ಉಭಯ […]
ನಾಳೆ ಕೊಡಗಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಕುಶಾಲನಗರ ಪುರಸಭೆ ವ್ಯಾಪ್ತಿಯ KSRTC ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‍ನ್ನು (Indira Canteeen) ಮೇ, 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರು ಸಾರ್ವಜನಿಕರ ಉಪಯೋಗಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.
ಕೆ.ಎಂ.ಎ. ವತಿಯಿಂದ ಕುಪ್ಪಂದಿರ ಕೆ.ಯೂಸುಫ್ ಹಾಜಿಗೆ ಬೀಳ್ಕೊಡುಗೆ

ಪ್ರಪಂಚದಾದ್ಯಂತದ ವೈವಿಧ್ಯಮಯ ಭಾಷೆಗಳ, ವಿವಿಧ ವರ್ಣಗಳ ಮತ್ತು ವಿವಿಧ ಆರ್ಥಿಕ ವರ್ಗಗಳ ಜನರು ಒಟ್ಟು ಸೇರುವ ಪವಿತ್ರ ಹಜ್ ಯಾತ್ರೆಯು ಯಾತ್ರಾರ್ಥಿಗಳಲ್ಲಿ ಏಕತೆ ಮತ್ತು ಸಮಾನತೆಯ ಭಾವನೆ ಮೂಡಿಸುತ್ತದೆ. ಒಂದೇ ಸಮಯದಲ್ಲಿ ಮತ್ತು ಒಂದೇ ಸ್ಥಳದಲ್ಲಿ ಒಬ್ಬನೇ ಸರ್ವಶಕ್ತನನ್ನು ಆರಾಧಿಸುವ ಈ ಹಜ್ಜ್ ನಿರ್ವಹಣೆ ವಿಶ್ವಾಸಿಗಳ ಜೀವನದ ಬಹುದೊಡ್ಡ ಆಧ್ಯಾತ್ಮಿಕ ಅನುಭವವಾಗಿದೆ. ಆಧ್ಯಾತ್ಮಿಕ ಉತ್ಕರ್ಷ, ಸಮಾನತೆ, ಸಹೋದರತೆಗಳನ್ನು ಬೆಳೆಸಿ ಮುಂದಿನ ಕೆಡುಕು ರಹಿತ ಬದುಕು ಮತ್ತು ಆತ್ಮ ಪರಿಶುದ್ಧತೆಯನ್ನು ಏಕೀಕರಿಸುವುದರಲ್ಲಿ ಹಜ್ಜ್ ಬಹು ದೊಡ್ಡ ಪಾತ್ರ ವಹಿಸುತ್ತದೆ […]