ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮೊಂಬತ್ತಿ ಹಿಡಿದು ಹಿಂದೂ ಮಲಯಾಳಿ ಸಮಾಜ ಪ್ರತಿಭಟನೆ

ವಿರಾಜಪೇಟೆ: ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಉಗ್ರರು ನಡೆಸಿದ ಪೈಶಾಚಿಕ ಕ್ರೌರ್ಯವನ್ನು ಖಂಡಿಸಿ ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ಹಿಂದೂ ಮಲಯಾಳಿ (Hindu Malayali) ಅಸೋಶಿಯೇಷನ್, ಹಿಂದೂ ಮಲಯಾಳಿ ಅಸೋಶಿಯೇಷನ್ ಮಹಿಳಾ ಘಟಕ ವಿರಾಜಪೇಟೆ ಮತ್ತು ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆಯ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು ಶ್ರೀ ಮುತ್ತಪ್ಪ ಮಲಯಾಳಿ ಸಮಾಜ ಅದ್ಯಕ್ಷ ಪಿ.ಜಿ. ಸುಮೇಶ್ ಮಾತನಾಡಿ, ಉಗ್ರರ ಧಾಳಿಯನ್ನು ನಾವು ಖಂಡಿಸುತ್ತೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿಗೆ ಮಾಡಿರುವುದನ್ನು ಸಹಿಸಲಾರದ […]
ನಾಳೆಯಿಂದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ವಾಹನಗಳು ದುಬಾರಿ!

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಅಲ್ಲದೇ ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ಲೈಫ್ ಟೈಮ್ ಟ್ಯಾಕ್ಸ್ (Tax) ಹೆಚ್ಚಾಗುತ್ತಿದೆ. ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯಲ್ಲೋ ಬೋರ್ಡ್ ವಾಹನ ಖರೀದಿ ಕರ್ನಾಟಕದಲ್ಲಿ ಬಲು ದುಬಾರಿಯಾಗಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ ತೆರಿಗೆ ಪಾವತಿಸಬೇಕು. ಹೊಸ ಆದೇಶ ನಾಳೆಯಿಂದಲೇ ಜಾರಿಯಾಗುತ್ತಿದೆ. ಮೇ 1ರಿಂದ 10 ಲಕ್ಷ ರೂ. […]
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ(Kodagu Institute of Medical Sciences) ಅಪ್ರತಿಮ 2019ನೇ ಬ್ಯಾಚಿನ ಅವಿರತ 2025 ಘಟಿಕೋತ್ಸವ (Convocation) ಸಮಾರಂಭವು ಬುಧವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್‍ನಲ್ಲಿ ನಡೆಯಿತು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಭಗವಾನ್ ಬಿ.ಸಿ.ಅವರು ಮಾತನಾಡಿ, ಈ ಕ್ಷಣವು ವಿದ್ಯಾರ್ಥಿಗಳಿಗಿಂತ ಅವರ ಪೋಷಕರಿಗೆ ಅತೀವ ಸಂತೋಷ ತಂದಿರುವ ದಿನವಾಗಿದೆ ಎಂದರು. ಈ ದಿನದ ವರೆಗೂ ನೀವು ವಿದ್ಯಾರ್ಥಿಗಳಾಗಿದ್ದಿರಿ, ಇಂದಿನಿಂದ ವೃತ್ತಿಪರ ವೈದ್ಯರಾಗುತ್ತಿದ್ದಿರ ಎಂದು ತಿಳಿದರು. ಪದವಿ […]
ಸಮಗ್ರ-ಸಮತೆಯೆಡೆಗೆ ಸಾಹಿತ್ಯ: ರಾಷ್ಟ್ರೀಯ ವಿಚಾರ ಸಂಕಿರಣ

ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಕುಶಾಲನಗರ (Kushalnagar) ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟಿಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯರವರ “ಬೆಂದೊಡಲ ಕುಣಿತ” ಎಂಬ ಕೃತಿಯನ್ನು […]
ಚೆಕ್ಕೇರ ಕಪ್ ಕ್ರಿಕೆಟ್: ಅಜ್ಜಿಕುಟ್ಟಿರ ತಂಡದ ಪರ ಮೈದಾನಕ್ಕಿಳಿದ ಶಾಸಕ ಪೊನ್ನಣ್ಣ

ಹುದಿಕೇರಿಯಲ್ಲಿ ನಡೆಯುತ್ತಿರುವ ಚೆಕ್ಕೇರ ಕಪ್ ಕ್ರಿಕೆಟ್ (Chekkera Cup Cricket) ಪಂದ್ಯಾವಳಿಯ ವಿಶೇಷ ಅತಿಥಿಯಾಗಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ (Ponnanna) ರವರು ಭಾಗವಹಿಸಿ ಶುಭ ಕೋರಿದರು. ಕೊಡಗಿನ ಕೊಡವ ಕುಟುಂಬಸ್ಥರ ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಚೆಕ್ಕೇರ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ, ಹಲವು ಪ್ರಬಲ ಕ್ರಿಕೆಟ್ ಕುಟುಂಬಗಳು ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸೆಣಸಾಟ ನಡೆಸುತ್ತಿದೆ. ಇಂದು ಮೈದಾನಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು, ಕ್ರಿಕೆಟ್ ತಂಡಗಳ ಸದಸ್ಯರೊಂದಿಗೆ ಹಲವು ಸಮಯವನ್ನು […]
ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ ಯುವಕ ಬಂಧನ: ಓರ್ವ ಸಾವು

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮವಾಗಿ ವ್ತಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾದ ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ ಮತ್ತು ಅಜಾಗೂಕತೆಯಿಂದ ವಾಹನ ಚಾಲನೆ ಮಾಡಿ ಪಾದಚಾರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾಗಿರುವ ಕೆಎ-05-ಎಂಕ್ಯೂ-2672 ಕಾರಿನ ಚಾಲಕನಾದ ಶಿವನ್ ಕರುಂಬಯ್ಯನ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 281,125(ಬಿ), 105, 62 ಬಿ.ಎನ್.ಎಸ್ ಆಕ್ಟ್ […]
ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ

2025 ನೇ ಸಾಲಿನ ಜೂನ್/ ಜುಲೈನಲ್ಲಿ ನಡೆಯಲಿರುವ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಹಾಗೂ 6 ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಂಡಶುಲ್ಕ ರಹಿತ ಮೇ, 05 ಹಾಗೂ ದಂಡ ಶುಲ್ಕದೊಂದಿಗೆ ಮೇ, 12 ಕೊನೆಯ ದಿನವಾಗಿದೆ. ಹಾಗೆಯೇ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿಯು (Admissions) ಆರಂಭವಾಗಿರುತ್ತದೆ. ಪ್ರವೇಶಾತಿ ಬಯಸುವವರು ಕಾಲೇಜನ್ನು ಸಂಪರ್ಕಿಸಬಹುದು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಕೊಡಗಿನಲ್ಲಿ ವಿದ್ಯುತ್ ಸಮಸ್ಯೆಗಳಿಗೆ ಸಹಾಯವಾಣಿ ಕೇಂದ್ರ ಆರಂಭ

ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್ (Electricity) ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ. […]
ಪಹಲ್ಗಾಮ್ ಭಯೋತ್ಪಾದಕರ ದಾಳಿಗೆ ಕೆಎಂಎ ಖಂಡನೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ (Pahalgam) ಬೈಸರಾನ್ ವ್ಯಾಲಿಯಲ್ಲಿ ಏ. 22ರಂದು ನಡೆದ ಉಗ್ರರ ದಾಳಿ ತೀವ್ರ ಖಂಡನೀಯ. ಈ ದಾಳಿಯಲ್ಲಿ ನಮ್ಮ ಕರ್ನಾಟಕ ರಾಜ್ಯದ ಮೂರು ಸೇರಿದಂತೆ ಒಟ್ಟು 26 ಮಂದಿ ಅಮಾಯಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಎಲ್ಲರಿಗೂ ಸಂತಾಪಗಳು. ಹೃದಯವಿದ್ರಾವಕವಾದ ಉಗ್ರರ ಈ ದಾಳಿ ಮಾನವೀಯತೆಗೆ ಕಳಂಕವಾಗಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (KMA) ಖಂಡನೆ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. […]
ಕೊಡಗು ಪೊಲೀಸ್ ಶ್ವಾನ ಪೃಥ್ವಿ ಇನ್ನಿಲ್ಲ

ಕೊಡಗು ಪೊಲೀಸ್ ಇಲಾಖೆಯ ಶ್ವಾನ ಪೃಥ್ವಿ (Prithvi) ಹೃದಯಾಘಾತದಿಂದ ಮೃತಪಟ್ಟಿದೆ. 6 ತಿಂಗಳು ಬೆಂಗಳೂರಿನಲ್ಲಿ ತರಬೇತಿ ಪಡೆದ ಪೃಥ್ವಿ ತದನಂತರ ಕೊಡಗು ಜಿಲ್ಲೆಗೆ ನಿಯೋಜನೆಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ವಿಐಪಿ/ ವಿವಿಐಪಿ ಸುರಕ್ಷತಾ ಕರ್ತವ್ಯಗಳಲ್ಲಿ ಭಾಗಿಯಾಗಿತ್ತು. ಗೋವಾ ಮತ್ತು ಪಾಂಡಿಚೇರಿಗಳಲ್ಲಿ ಪ್ರಧಾನ ಮಂತ್ರಿ ಕರ್ತವ್ಯ ನಿಮಿತ ಭಾಗಿಯಾಗಿದೆ. ದಕ್ಷಿಣ ವಲಯ ಮತ್ತು ಪೊಲೀಸ್ ಕರ್ತವ್ಯ ಕೋಟಗಳಲ್ಲಿ ಪದಕ ಗಳಿಸಿದ ಕೀರ್ತಿ ಪೃಥ್ವಿ ಸಲ್ಲುತ್ತದೆ.