ಬೆಂಗಳೂರಿನಲ್ಲಿ ಕಪಿಲ್ ದೇವ್-ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಪ್ರಾರಂಭ

Kapil Dev

ಬೆಂಗಳೂರು: ಕಪಿಲ್ ದೇವ್- ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಇಂದು ಬೆಂಗಳೂರಿನ (Bengaluru) ಪ್ರತಿಷ್ಠಿತ ಪ್ರೆಸ್ಟೀಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಪ್ರಾರಂಭವಾಯಿತು. ಮೊಟ್ಟಮೊದಲ ಬಾರಿಗೆ ಭಾರತದ ಮುಂಚೂಣಿಯ ಪುರುಷ ಹಾಗೂ ಮಹಿಳಾ ವೃತ್ತಿಪರರು ಪರಸ್ಪರ ರೂ.2 ಕೋಟಿಗಳ ಬಹುಮಾನಕ್ಕೆ ಹಣಾಹಣಿ ನಡೆಸಲಿದ್ದು ಈ ಕ್ರೀಡೆಗೆ ಮಹತ್ತರ ಕ್ಷಣವಾಗಿಸಿದೆ. ಖ್ಯಾತ ಕ್ರಿಕೆಟ್ ಪಟು ಕಪಿಲ್ ದೇವ್ (Kapil Dev) ಮತ್ತು ಪ್ರೀಮಿಯಂ ಕನ್ಸಲ್ಟಿಂಗ್ ಸಂಸ್ಥೆ ಗ್ರಾಂಟ್ ಥಾರ್ನ್ಟನ್ ಭಾರತ್ ಜಂಟಿಯಾಗಿ ಪ್ರಸ್ತುತಪಡಿಸುತ್ತಿರುವ ಈ ಟೂರ್ನಮೆಂಟ್ ಅನ್ನು ಪ್ರೊಫೆಷನಲ್ […]

ಮಡಿಕೇರಿಯಲ್ಲಿ ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ

Dr.Rajkumar

ಮಡಿಕೇರಿ:- ಚಲನಚಿತ್ರ ಬರೀ ಮನರಂಜನೆಯಲ್ಲ. ಅದೊಂದು ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆ ತರುವ ಮಾಧ್ಯಮವಾಗಿದೆ. ಆ ನಿಟ್ಟಿನಲ್ಲಿ ಡಾ.ರಾಜ್‍ಕುಮಾರ್ (Dr.Rajkumar) ಅವರು ಕನ್ನಡ ನಾಡಿನ ಚಲನಚಿತ್ರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಕನ್ನಡಿಗರ ಕಣ್ಮಣಿಯಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ […]

ಹಿರಿಯ ರಾಜಕಾರಣಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಇನ್ನು ನೆನಪು ಮಾತ್ರ

Bottolanda Mitoo Chengappa

ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ (Bottolanda Mitoo Chengappa) ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಸಾವ೯ಜನಿಕರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ […]

Jammu and Kashmir: ಭಾರತೀಯ ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ… ಓರ್ವ ಯೋಧ ಹುತಾತ್ಮ

Jammu and Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಉಗ್ರರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಭಾರತೀಯ ಸೇನೆ ಮುಂದಾಗಿದೆ. ಇದೀಗ ಭಯೋತ್ಪಾದಕರನ್ನು ಸದೆಬಡೆಯಲು ಕಾಲ ಕೂಡಿ ಬಂದಿದೆ. ಇಂದು ಉಧಂಪೂರ್ ಬಳಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪಿನ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ (Soldier) ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ (ಏ.24) ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ […]

ಲಾವಣ್ಯ ಬೋರ್ಕರ್ ಗೆ ಡಾ. ಬಿ‌.ಆರ್‌.ಅಂಬೇಡ್ಕರ್ ಸದ್ಭಾವನಾ ಪ್ರಶಸ್ತಿ

Dr. B. R. Ambedkar Sadbhavana Award

ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕರ್ ರವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ (Dr. B. R. Ambedkar) ಸದ್ಭಾವನಾ ರಾಷ್ಟ್ರ ಮಟ್ಟದ ಪ್ರಶಸ್ತಿಗೆ (Award) ಭಾಜನರಾಗಿದ್ದಾರೆ. ಅವರು ಭರತನಾಟ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ )ಸಂಸ್ಥೆಯ ವತಿಯಿಂದ ಮೈಸೂರಿನ ಸಾಹಸಸಿಂಹ ಸಭಾಂಗಣ ಡಾ.ವಿಷ್ಣು ವರ್ಧನ್ ಸ್ಮಾರಕ ಭವನದಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ವಿವಿಧ ಸಾಧಕರುಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ […]

Power Cut… ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 13 ದೇವನೂರು ಫೀಡರ್‍ನಲ್ಲಿ ಏಪ್ರಿಲ್, 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ದೇವನೂರು, ಮಲ್ಲೂರು, ಕಿಸ್ತೂರು, ರಾಜಪುರ, ಬೆಟ್ಟತ್ತೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಸುಳುಗೋಡು, ಬಾಳೆಲೆ, ಜಾಗಲೆ, ನಿಟ್ಟೂರು, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಸಾಧಕ-ಬಾಧಕ ಸಂವಾದ ಕಾರ್ಯಕ್ರಮ

Kodagu University

ಮಡಿಕೇರಿ: ಸರ್ಕಾರದಿಂದ ಕೊಡಗಿಗೆ ಒದಗಿಬಂದ ಸೌಲಭ್ಯವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ಕೈಬಿಡುವ ಕೆಲಸ ಆಗಬಾರದು ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ (Kodagu University) ಸಾಧಕ-ಬಾಧಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ರಾಜ್ಯದಲ್ಲಿ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಚಿಂತನೆ ನಡೆಸಿದ್ದು, ಅದರಲ್ಲಿ ಕೊಡಗು ವಿಶ್ವವಿದ್ಯಾಲಯವೂ ಒಂದು. ನೂರಾರು ಎಕರೆ […]

ಕಾವೇರಿ ಕಾಲೇಜಿನಲ್ಲಿ ಏಡ್ಸ್ ಕುರಿತ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Awareness program

ಏಡ್ಸ್ (AIDS) ಎಂಬುದು ಒಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು ನಾವು ಇಡುವಂತಹ ತಪ್ಪು ಹೆಜ್ಜೆಯ ಮೂಲಕ ಗುಣವಾಗಲಾರದಂತಹ ಈ ಮಾರಕ ಕಾಯಿಲೆಗೆ ಬಲಿಯಾಗಬೇಕಾಗುತ್ತದೆ ಎಂದು ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು. ಕೊಡಗು ಜಿಲ್ಲೆ ಏಡ್ಸ್ ನಿಯಂತ್ರಣ ಘಟಕ ಹಾಗೂ ಕಾವೇರಿ ಕಾಲೇಜಿನ ಎನ್ಎಸ್ಎಸ್ ಮತ್ತು ರೆಡ್ ರಿಬ್ಬನ್ ಘಟಕದ ವತಿಯಿಂದ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಏಡ್ಸ್ ಕುರಿತ ಜಾಗೃತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾನವನ ಅಜಾಗರುವುಕತೆ ಹಾಗೂ […]

ಸಹಾಯವಾಣಿ ಆರಂಭಿಸಿ ಸರ್ಕಾರ: ಜಮ್ಮು ಕಾಶ್ಮೀರ ಪ್ರವಾಸ ತೆರಳಿರುವ ವಿವರ ಇಲ್ಲಿ ಹಂಚಿಕೊಳ್ಳಿ

Kashmir

ಕಾಶ್ಮೀರದ ಪಹಲ್‍ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ (Kashmir) ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (ಟೂರ್ ಆಫರೇಟರ್ಸ್ ಮತ್ತು ಟ್ರಾವಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ (Helpline) ನೀಡಬೇಕೆಂದು ಕೋರಿದೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ 080-43344334, […]

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Horticulture training

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ (Horticulture) ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್, 28 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ […]