ವಾಹನ ಸವಾರರೇ ಗಮನಿಸಿ: ಕೊಡಗಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಮಡಿಕೇರಿ (Madikeri) ಕುಟ್ಟ ಹೆದ್ದಾರಿ ಸಂ-89ರ ಕಿ.ಮೀ. 80.40 ರಲ್ಲಿನ (ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಭಾಗದಲ್ಲಿ ಮಳೆಹಾನಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಏಪ್ರಿಲ್, 08 ರಿಂದ ಮೇ, 10 ರವರೆಗೆ ಪೊನ್ನಂಪೇಟೆ ತಾಲ್ಲೂಕು ಮಡಿಕೇರಿ ಕುಟ್ಟ ಹೆದ್ದಾರಿ ಸಂ.89ರ ಕಿ.ಮೀ.80.40 ರಲ್ಲಿನ(ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಮಾರ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ (Vehicle) ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕೊಡಗು ಜಿಲ್ಲೆಗೆ ಯಾರು ಟಾಪರ್ಸ್? ಇಲ್ಲಿದೆ ವಿವರ

2024–25 ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಶೇ 83.84 ರಷ್ಟು ಫಲಿತಾಂಶ ದಾಖಲಿಸಿದ್ದು, ರಾಜ್ಯದಲ್ಲಿ ಕೊಡಗು ಜಿಲ್ಲೆ 4 ನೇ ಸ್ಥಾನ ಗಳಿಸಿದೆ. 2024 ರ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯು 5 ಸ್ಥಾನದಿಂದ 4 ನೇ ಸ್ಥಾನವನ್ನು ಪಡೆದಿದೆ. ಜಿಲ್ಲೆಯಲ್ಲಿ 4697 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3938 ಮಂದಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ ಕುಳಿತಿದ್ದ 2,320 ಬಾಲಕರಲ್ಲಿ 1750 ಬಾಲಕರು ಉತ್ತೀರ್ಣರಾಗಿ 75.43 ರಷ್ಟು ಫಲಿತಾಂಶ ಪಡೆದಿದ್ದಾರೆ. […]
ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡಲು ಇಲ್ಲಿದೆ ಟಿಪ್ಸ್

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎನ್ನುವುದು ಪ್ರತಿಯೊಬ್ಬ ಪೋಷಕರ ಕನಸು . ತಮ್ಮ ಮಕ್ಕಳು ಮುಂದೆ ಜೀವನದಲ್ಲಿ ಉತ್ತಮ ನಾಗರಿಕರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಹೀಗಾಗಿ ಅವರಿಗೆ ನಾವು ಒಳ್ಳೆಯದನ್ನೇ ಕಲಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಪ್ರಸ್ತುತ ಮೊಬೈಲ್ ಬಳಕೆ ಚಟವಾಗಿ ಮಾರ್ಪಟ್ಟಿದೆ. ಹಲವು ಪೋಷಕರು ದಿನವಿಡೀ ಸ್ಮಾರ್ಟ್‌ಫೋನ್ (Smartphones) ಬಳಕೆಯಲ್ಲಿ ನಿರತರಾಗಿರುತ್ತಾರೆ. ಕುಟುಂಬ ಮತ್ತು ಮಕ್ಕಳೊಂದಿಗೆ ಕೆಲಸ ಸಮಯವನ್ನು ಕಳೆಯುವ ಬದಲು, ಮೊಬೈಲ್ ಒಂದು ಅಭ್ಯಾಸವಾಗಿದೆ. ಇದನ್ನು ನೋಡಿ ಮಕ್ಕಳು ಸಹ ಫೋನ್‌ಗಳ ಕೆಟ್ಟ […]
2nd PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್ಸೈಟ್ನಲ್ಲಿಯೂ ಫಲಿತಾಂಶ ಲಭ್ಯವಿದೆ. ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದರೆ ಕೊಡಗು ಜಿಲ್ಲೆ 4ನೇ ಸ್ಥಾನ (ಶೇ.83.84) ಹಾಗೂ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. karresults.nic.in ಹಾಗೂ […]
ಪ್ರತಿಭಾನ್ವಿತ ಕ್ರೀಡಾಪಟುಗಳ ವಿಶೇಷ ಆಯ್ಕೆ ಶಿಬಿರ

ಪ್ರಸಕ್ತ(2025-26) ಸಾಲಿಗೆ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ 8 ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿಗೆ ಈಗಾಗಲೇ ಆಯ್ಕೆ ಪ್ರಕ್ರಿಯೆ ಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದೆ ಅವಕಾಶ ವಂಚಿತರಾದ ಪ್ರತಿಭಾನ್ವಿತ ಕ್ರೀಡಾಪಟುಗಳ (athletes) ಆಯ್ಕೆಯನ್ನು ಏಪ್ರಿಲ್, 15 ರಂದು ಹಾಕಿ ಮೈಸೂರು ಚಾಮುಂಡಿ ವಿಹಾರ ಕ್ರೀಡಾಂಗಣ, ಜಿಮ್ನಾಸ್ಟಿಕ್ಸ್ ತುಮುಕೂರು ಜಿಲ್ಲಾ ಕ್ರೀಡಾಂಗಣದಲ್ಲಿ, ಫುಟ್ಬಾಲ್ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಏಪ್ರಿಲ್, 17 ರಂದು ಅಥ್ಲೆಟಿಕ್ಸ್, ಬಾಸ್ಕೇಟ್ ಬಾಲ್, ವಾಲಿಬಾಲ್ ಮತ್ತು ಕಬಡ್ಡಿ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ […]
ನೂತನ ಎಎಸ್‌ಪಿಯಾಗಿ ಬಾರಿಕೆ ದಿನೇಶ್ ಕುಮಾರ್ ನೇಮಕ

ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ (ASP) ಸುಂದರರಾಜ್ ರವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕೊಡಗು ಮೂಲದ ಬಾರಿಕೆ ದಿನೇಶ್ ಕುಮಾರ್ (Dinesh Kumar) ನೇಮಕ. 2 ವರ್ಷಗಳ ಹಿಂದೆ ಡಿ ವೈ ಎಸ್ ಪಿ ಆಗಿ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮವು (program) ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ […]
2nd PUC Result: ನಾಳೆ ದ್ವಿತೀಯ ಪಿಯು ಫಲಿತಾಂಶ: ನೋಡುವುದು ಹೇಗೆ?

ದ್ವಿತೀಯ ಪಿಯು (2nd PUC) ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್. ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 8ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್ಲೋಡ್ […]
ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಹಾಗೂ ಸಂಬಂಧಿಸಿದ ಕಾಯ್ದೆ ಕಾರ್ಯಾಗಾರ

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ (Karnataka Land Grabbing Prohibition Act) ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಇವರ […]
ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ (Girls) ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು (program) ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು ಫೌಂಡೇಶನ್ ಗೆ ನೀಡಲಾಗುತ್ತದೆ. ಅನ್ಷುಲಾ ಲೇಡೀಸ್ ಎಂಟ್ರಿಪ್ರಿನರ್ ಕ್ಲಬ್ ಮತ್ತು ಮಧುರಾ ವುಮೆನ್ಸ್ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ […]