Women’s Day: ಸಮಾಜ ಸೇವಕಿ ಲೀಲಾ ಮೇದಪ್ಪಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯು ಸಮಾಜ ಸೇವೆಯಲ್ಲಿ ಉತ್ತಮ ಸೇವೆ ಮಾಡಿರುವವರಿಗೆ ಕೊಡಮಾಡುತ್ತಿರುವ ರಾಜ್ಯ ಪ್ರಶಸ್ತಿಗೆ ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯೆ ಹಾಗೂ ಕೊಡಗು (Kodagu) ಜಿಲ್ಲಾ ಹಾಪ್ ಕಾಮ್ಸ್ ನ ನಿರ್ದೇಶಕಿ ಸುಂಟಿಕೊಪ್ಪದ ಚಟ್ರಂಡ ಲೀಲಾ ಮೇದಪ್ಪ (Leela Medappa) ಅವರು ಭಾಜನರಾಗಿದ್ದಾರೆ. ಮಹಿಳಾ ದಿನಾಚರಣೆ ಪ್ರಯುಕ್ತ ಶಿಕಾರಿಪುರದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ಆಯೋಜಿಸಿರುವ ತೋಟಗಾರಿಕೆ ಮತ್ತು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ […]
ಬೀದಿ ಬದಿ ವ್ಯಾಪಾರಿಗಳೇ ಗಮನಿಸಿ…

ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಸಂಪಾಜೆಯಿಂದ ಕುಶಾಲನಗರದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಲ್ಲಲ್ಲಿ ಅನಧಿಕೃತವಾಗಿ ಹಣ್ಣಿನ ಅಂಗಡಿಗಳನ್ನು ಮತ್ತು ಇತರೆ ಗೂಡಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಗ್ರಾಹಕರು ಅಂಗಡಿಗಳ ಮುಂದೆ ವಾಹನಗಳನ್ನು ನಿಲ್ಲಿಸಿಕೊಳ್ಳುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ರಸ್ತೆಯಲ್ಲಿನ ವಾಹನ ನಿಲುಗಡೆಯಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯಿರುವುದರಿಂದ ಮಾರ್ಚ್, 15 ರೊಳಗೆ ಸಂಬಂಧಿಸಿದ ಬೀದಿ ಬದಿ ವ್ಯಾಪಾರಿಗಳು (Street vendor) ಅಂಗಡಿಗಳನ್ನು ತೆರವುಗೊಳಿಸಬೇಕು, ತಪ್ಪಿದ್ದಲ್ಲಿ ಮಾರ್ಚ್, 16 ರಿಂದ ಪೊಲೀಸ್ ಸಹಯೋಗದೊಂದಿಗೆ ಇಲಾಖೆಯ ವತಿಯಿಂದ […]
ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ಕಾಲರ್ಶಿಪ್, ಪ್ರತಿಭಾ ಪುರಸ್ಕಾರ ವಿತರಣೆ

ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಎಲ್ಲಾ ವರ್ಷವು ನೀಡಿ ಬರುವ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಕೊಡಗಿಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಫೆ.01 ರಂದು ಹೊದವಾಡದಲ್ಲಿರುವ ರಾಫಲ್ಸ್ […]
ಕರ್ನಾಟಕ ಬಜೆಟ್ 2025: ಕೊಡಗಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯನವರು (CM Siddaramaih) ದಾಖಲೆಯ 16ನೇ ಬಜೆಟ್ (Budget) ಅನ್ನು ಮಂಡಿಸಿದ್ದಾರೆ. ಬರೋಬ್ಬರಿ 4.09 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಹಾಗಾದರೆ ಕೊಡಗು ಜೆಲ್ಲೆಗೆ (Kodagu) ಈ ಬಾರಿ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳು ಏನು ಎಂದು ತಿಳಿಯೋಣ. * ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುತ್ತದೆ. * ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ […]
Karnataka Budget 2025: ಸಿದ್ದರಾಮಯ್ಯ ಬಜೆಟ್ ಪ್ರಮುಖಾಂಶಗಳು

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಮಂಡನೆ ಪೂರ್ಣಗೊಂಡಿದೆ. ಬರೋಬ್ಬರಿ 3 ಗಂಟೆ 30 ನಿಮಿಷ ಬಜೆಟ್ ಭಾಷಣ ಮಾಡಿದ್ದು, 178 ಪುಟಗಳ ಯೋಜನೆಗಳನ್ನು ಓದಿದ್ದಾರೆ. ದಾಖಲೆಯ 16 ನೇ ಬಾರಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಈ ಬಜೆಟ್ ಯಾರಿಗೆ ಸಿಹಿಯಾಗಿತ್ತು, ಯಾರಿಗೆ ಕಹಿ, ಯಾವ ವಲಯಕ್ಕೆ ಎಷ್ಟು ಅನುದಾನ, ಹೊಸ ಕೊಡುಗೆಗಳು ಏನು ಎನ್ನುವುದನ್ನು ಇಲ್ಲಿ ತಿಳಿಯೋಣ. ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ನ […]
ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ […]
ಮಡಿಕೇರಿ ನಗರ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

ಮಡಿಕೇರಿ (Madikeri) ನಗರ ಠಾಣೆಯಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ (General Thimmaiah Public School) ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಿದ್ದು ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ಠಾಣೆಯ ಬಗ್ಗೆ, ಪೊಲೀಸ್ ಸೇವೆಗಳ ಬಗ್ಗೆ, ಮಕ್ಕಳ ಕಾನೂನು, ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು ಮುಂತಾದವ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡಗು ಜಿಲ್ಲಾ ಬಿಜೆಪಿ ಅಹೋರಾತ್ರಿ ಧರಣಿ

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಬಾರದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆಡೆಗೆ ಬಳಸದಿರಿ, ಕಾಫಿ ಉತ್ಪಾದನೆ ಕುಂಠಿತವಾಗಿದ್ದು ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದೆ. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮಾರ್ಚ್ 11ರಂದು ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದೇ ಉಳಿಸಬೇಕು, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ […]
ಪೊಲೀಸ್ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಮಾ.09 ರಂದು ಮ್ಯಾರಥಾನ್

ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾರ್ಚ್ 9 ರಂದು ಮ್ಯಾರಥಾನ್ (Marathon) ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ […]
ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಯಾವುದೇ ಫಲಾಪೆಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಚ್ಚಪಂಡ ಮಹೇಶ್ ಗಣಪತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಕೊಡಗು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ ವತಿಯಿಂದ ಬೇಟೋಳಿ ಗ್ರಾಮ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ 2024-25 ನೇ ಸಾಲೀನ ವಾರ್ಷಿಕ ಶಿಭಿರದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಿಬಿರವನ್ನು ಹೂ ಗಿಡಕ್ಕೆ ನೀರು ಎರೆಯುವ […]