ಕಿರಣ್‌ಗೆ ರಾಜ್ಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿ

ವಿರಾಜಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಬೆಂಗಳೂರು ( ರಿ) ಇದರ ರಾಜ್ಯ ಮಟ್ಟದ ಪದಗ್ರಹಣ ಸಮಾರಂಭ ಧಾರವಾಡದ ವಿದ್ಯಾವರ್ಧಕ ಸಂಘ ಪಾಟೀಲ್ ಪುಟ್ಟಪ್ಪ ಭವನದಲ್ಲಿ ಜರುಗಿತು. ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಉಪನಿರ್ದೆೇಶಕರ ಕಛೇರಿಯ ಸೂಪರಿಡೆಂಟ್ ಆಗಿ ಹಾಗೂ ಭರತನಾಟ್ಯ ಕಲಾವಿದರಾಗಿ ಸೇವೆ ಸಲ್ಲಿಸುತಿರುವ ಕಿರಣ್ ಎಸ್ ಕೆ ರವರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ರಮಾ , ಬಸವರಾಜು ಗುರಿಕಾರ್ […]

ಭೂಮಿ ಮತ್ತು ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಎಸ್. ನಟರಾಜ

ಪ್ರಕೃತಿ ಮತ್ತು ಭೂಮಿಯ ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿಯು ಭೂಮಿಯ ಮೇಲಿರುವ ಸರ್ವರ ಮೇಲಿದೆ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ ಅಭಿಪ್ರಾಯ ವ್ಯಕ್ತಪಡಿಸಿದರು . ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಅರಣ್ಯ ಇಲಾಖೆ, ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ವಿರಾಜಪೇಟೆ ಇವರ ಸಂಯುಕ್ತ ಆಶಯದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರನ್ನು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. […]

ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತಿನಿಂದ ಹೊಸ ಭಾಷ್ಯ: ಸಾಧಕರಿಗೆ ಗೌರವಾರ್ಪಣೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿಯನ್ನು ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಮಾಹಿತಿ ನೀಡಿದರು . ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ನೌಕರರ ಒತ್ತಡವನ್ನು ನಿವಾರಿಸಿ ಅವರಲ್ಲಿರುವ ಮನೋರಂಜನೆಯ ಕೊರತೆಯನ್ನು ಹೋಗಲಾಡಿಸುವುದರೊಂದಿಗೆ ಕನ್ನಡ ನಾಡು, ನುಡಿ ಸಾಹಿತ್ಯ ,ಕಲೆ […]

ನಕ್ಸಲ್ ನಿಗ್ರಹ ಪಡೆ ವತಿಯಿಂದ ಬುಡಕಟ್ಟು ಜನಾಂಗದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿನ ವಾಲ್ಮೀಕಿ ಭವನದಲ್ಲಿ ನಕ್ಸಲ್ ನಿಗ್ರಹ ಪಡೆ ವತಿಯಿಂದ ಅತ್ಯಂತ ವ್ಯವಸ್ಥಿತವಾದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶಗಳ ಬುಡಕಟ್ಟು ಜನಾಂಗದವರ ಆರೋಗ್ಯ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವು ಜನರ ಅಭೂತಪೂರ್ವ ಸ್ಪಂದನೆಯೊAದಿಗೆ ಯಶಸ್ವಿಯಾಯಿತು. ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಅವರ ಸೂಕ್ತ ಮಾರ್ಗದರ್ಶನದಂತೆ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕು.ಬಿಂದು ಮಣಿ ಆರ್.ಎನ್, ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, […]

ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ಪ್ರತಿಯೊಬ್ಬರು ರಕ್ತದಾನವನ್ನು ಸಾಮಾಜಿಕ ಜವಾಬ್ದಾರಿ ಎಂದು ಅರಿತುಕೊಳ್ಳಬೇಕು ಎಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ. ಕರುಂಬಯ್ಯ ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್ ಎಸ್ ಎಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾಸ್ಪತ್ರೆ ಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ […]

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆವಿ ಸಿದ್ದಾಪುರ ಮಾರ್ಗದಲ್ಲಿ ಏಪ್ರಿಲ್, 18 ರಂದು (ನಾಳೆ) ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ, ಸಿದ್ದಾಪುರ, ಕರಡಿಗೋಡು, ಗುಹ್ಯ, ಮಾಲ್ದಾರೆ, ನೆಲ್ಲಿಹುದಿಕೇರಿ, ಇಂಜಿಲಗೆರೆ, ಆರೆಂಜ್‍ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

ಹಜ್ಜ್ ಸೂಪರಿಂಟೆಂಡೆಂಟ್ ಆಗಿ ಕುಪ್ಪೋಡಂಡ ಎ. ರಫೀಕ್ ಆಯ್ಕೆ: ಕೆ.ಎಂ.ಎ ನಿಂದ ಗೌರವ

ಪೊನ್ನಂಪೇಟೆ: ಮುಂಬರುವ ಪವಿತ್ರ ಹಜ್ಜ್ ಕಾಲಾವಧಿಯಲ್ಲಿ ಹಜ್ಜ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಲು ಸೌದಿ ಅರೇಬಿಯಾ ದೇಶಕ್ಕೆ ಕರ್ತವ್ಯ ನಿಮಿತ್ತ ತೆರಳುತ್ತಿರುವ ಕರ್ನಾಟಕ ಅಪರಾಧ ತನಿಖೆ ವಿಭಾಗದ (CID) ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ (ಡಿ.ಪಿ.ಐ.) ಕುಪ್ಪೋಡಂಡ ಎ. ರಫೀಕ್ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಬೀಳ್ಕೊಡಲಾಯಿತು. ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಸೂಫಿ ಹಾಜಿಯವರ ಅಧ್ಯಕ್ಷತೆಯಲ್ಲಿ ಎಡಪಾಲದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಆಡಳಿತ ಮಂಡಳಿ ಪದಾಧಿಕಾರಿಗಳ ತಂಡ ರಫೀಕ್ ಅವರಿಗೆ ಶಾಲು ಹೊದಿಸಿ ಪುಷ್ಪಗುಚ್ಛ […]

2nd PUC ಪರೀಕ್ಷೆಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ದ್ವಿತೀಯ ಪಿ. ಯು. ಫಲಿತಾಂಶ ಪ್ರಕಟಗೊಂಡಿದ್ದು ವಿರಾಜಪೇಟೆ ಕಾವೇರಿ ಪಿ. ಯು. ಕಾಲೇಜಿನ ವಿದ್ಯಾರ್ಥಿಗಳು ಶೇಕಡ 88 ರಷ್ಟು ಫಲಿತಾಂಶವನ್ನು ನೀಡಿ ಸಾಧನೆಯನ್ನು ತೋರಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದಿದ್ದು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡ 90ರಷ್ಟು ಫಲಿತಾಂಶ ಪಡೆದಿದ್ದು ಅದರಲ್ಲಿ ಎಂ.ಎಸ್ ಫರೀದ 588 , ಬಿ.ಎಸ್.ಚೈತ್ರ547 , ಎಂ.ಎಸ್.ಮಾನ್ವಿ 541 ಅಂಕಗಳನ್ನು ಪಡೆದು ಉನ್ನತ ಶ್ರೇಣಿ ಪಡೆದರೆ […]

ವಿರಾಜಪೇಟೆಯ ಸಂತ ಅನ್ನಮ್ಮ ಪಿ.ಯು ಕಾಲೇಜು: ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

ವಿರಾಜಪೇಟೆ: ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸಂತ ಅನ್ನಮ್ಮ ಪಿ ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಧನೆಯನ್ನು ಮಾಡಿದ್ದು ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶವನ್ನು ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,49 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣ ರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 48 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,78 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜೆಸಿಕಾ […]

ಕಾವೇರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂವಾದ ಕಾರ್ಯಕ್ರಮ

ಪ್ರಯತ್ನ ಮತ್ತು ಪರಿಶ್ರಮದಿಂದ ಗುರಿಯನ್ನು ಮುಟ್ಟಬಹುದೇ ಹೊರತು ಅದೃಷ್ಟ, ಹಣೆಬರಹ ನಂಬಿದರೆ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ರುದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ (Cauvery College) ಐಕ್ಯೂಎಸಿ ಹಾಗೂ ಇತಿಹಾಸ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಆಯೋಜಿಸಲಾಗಿದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ಸಮಯ ನಿರ್ವಹಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸ ವಿಷಯದ ಮಹತ್ವ ಎಂಬ ವಿಷಯದ ಕುರಿತು ನಡೆದ ಸಂವಾದ ಕಾರ್ಯಕ್ರಮವನ್ನು […]