ದುದ್ದಿಯಂಡ ಮುಸ್ಕಾನ್ ಸೂಫಿ ಚೊಚ್ಚಲ ಕವನ ಸಂಕಲನ ಪ್ರಕಟಿಸಿದ ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್

ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡಗಿನ ವಿದ್ಯಾರ್ಥಿನಿಯೊಬ್ಬರು ರಚಿಸಿದ ಕವನ ಸಂಕಲನ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡು ಸದ್ದಿಲ್ಲದೆ ಸುದ್ದಿಯಾಗಿದೆ. ವಿರಾಜಪೇಟೆ ಮೂಲದ ದುದ್ದಿಯಂಡ ಮುಸ್ಕಾನ್ ಸೂಫಿ ಅವರ ಚೊಚ್ಚಲ ಇಂಗ್ಲಿಷ್ ಕೃತಿ ‘ದಿಸ್ ಟೂ ಶೆಲ್ ಪಾಸ್’ ಅನ್ನು ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್ ಪ್ರಕಟಿಸಿದ್ದು, ಅಮೆರಿಕ ಮೂಲದ ಪ್ರಸಿದ್ಧ ಕವಿ ಎಮಿಲಿ ಡಿಕ್ಕಿನ್ಸನ್ ಸ್ಮರಣಾರ್ಥವಾಗಿ ನೀಡಲಾಗುವ 21ನೇ ಶತಮಾನದ ಅಂತರಾಷ್ಟ್ರೀಯ ಮಟ್ಟದ ‘ಇಂಡಿ ಆಥರ್ಸ್ ಅವಾರ್ಡ್ 2025’ ಕ್ಕೆ ನಾಮನಿರ್ದೇಶನಗೊಂಡಿದೆ. ಕೊಡವ ಮುಸ್ಲಿಂ ಸಮುದಾಯದ […]
ಅನುದಾನಿತ ಮತ್ತು ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಕೆಗೆ ಆಗ್ರಹ – ಶಾಸಕ ಡಾ. ಮಂತರ್ ಗೌಡರಿಗೆ ಮನವಿ ಸಲ್ಲಿಸಿದ ನಿಯೋಗ..!

ಸೋಮವಾರಪೇಟೆ : ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನಿತ ಮತ್ತು ಸರ್ಕಾರಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕ ಮತ್ತು ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ವತಿಯಿಂದ ಶಾಸಕ ಡಾ. ಮಂತರ್ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸೋಮವಾರಪೇಟೆಯಲ್ಲಿ ಭೇಟಿಯಾದ ನಿಯೋಗ ತಮ್ಮ ಸಮಸ್ಯೆಗಳ ಕುರಿತು ಶಾಸಕರಿಗೆ ಮನವರಿಕೆ ಮಾಡಿಕೊಟ್ಟಿತು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ. ಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಕಳೆದ […]
Big Breaking News : ಧರ್ಮಸ್ಥಳದಲ್ಲಿ ನೂರಾರು ಶ* ಹೂತಿಟ್ಟ ಕೇಸ್ – ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ..!

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ವ್ಯಕ್ತಿಯೊಬ್ಬ ಹೇಳಿದ ವಿಚಾರ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ(SIT)ವನ್ನು ರಾಜ್ಯ ಸರ್ಕಾರ ರಚಿಸಿದೆ. ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಈ ತಡದ ಮುಖ್ಯಸ್ಥರಾಗಿರಲಿದ್ದು, ಸದಸ್ಯರಾಗಿ ಉಪ ಪೊಲೀಸ್ ಮಹಾನಿರ್ದೇಶಕ ಎಂ.ಎಂ. ಅನುಚೇತ್, ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ, ಪೊಲೀಸ್ ಅಧೀಕ್ಷ ಜಿತೇಂದ್ರ ಕುಮಾರ್ ದಯಾಮ ಇರಲಿದ್ದಾರೆ. ಪ್ರಕರಣದ ತನಿಖೆಯ ಪ್ರಗತಿಯನ್ನು ಆಗಿಂದಾಗ್ಗೆ […]
ಭಾಗಮಂಡಲ ಗಜಾನನ ಯುವಕ ಸಂಘದ ವತಿಯಿಂದ ಆಂಬುಲೆನ್ಸ್ ಸೇವೆ ಆರಂಭ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ಗ್ರಾಮ ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ನೂತನ ಆಂಬುಲೆನ್ಸ್‌ಗೆ ಭಾಗಮಂಡಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹ್ಯಾರಿಸ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಜಾನನ ಯುವಕ ಸಂಘ ಸಮಾಜಕ್ಕೆ ಅನುಕೂಲವಾಗುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗ್ರಾಮಸ್ಥರು ಕೂಡಾ ಸಹಕಾರ ನೀಡಬೇಕೆಂದರು. ಸಂಘದ ಅಧ್ಯಕ್ಷ ಗೌರೀಶ್ ರೈ […]
ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ

ಮಡಿಕೇರಿ : ಪಾಲಿಬೆಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು. ಪೊಲೀಸ್ ಉಪನಿರೀಕ್ಷಕ ಹೆಚ್.ಕೆ. ಮಂಜುನಾಥ್ ಅವರು ಪೋಕ್ಸೊ ಕಾಯ್ದೆ,112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮ, ಮೊಬೈಲ್ ಬಳಕೆ, ಸೈಬರ್ ಅಪರಾಧ, ಬಾಲ ಅಪರಾಧ, ಗುಡ್ ಟಚ್-ಬ್ಯಾಡ್ ಟಚ್ ಇವುಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಕ್ಕಳ ಆರೋಗ್ಯದ […]
ಹಾಸನದಿಂದ ಬೂಕರ್‌ವರೆಗೆ ಬಾನು ಮುಷ್ತಾಕ್ ಪಯಣ – Coorg Buzzನಲ್ಲಿ ಪ್ರಸಾರವಾಗಲಿದೆ ಸಾಧಕಿಯ ಸಂದರ್ಶನ..!

ಮಡಿಕೇರಿ : ಸಾಹಿತ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ʼಬೂಕರ್ ಪ್ರಶಸ್ತಿʼ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು Coorg Buzz ಸಂದರ್ಶಿಸಿದೆ. ಹಾಸನದಲ್ಲಿರುವ ಅವರ ಮನೆಗೆ ಭೇಟಿ ನೀಡಿದ ಕೂರ್ಗ್ ಬಜ್ಹ್ ತಂಡ ಅವರನ್ನು ಅಭಿನಂದಿಸಿತು. ಬಳಿಕ ಬಾನು ಮುಷ್ತಾಕ್ ಅವರು ನಮ್ಮ ವಾರದ ವಿಶೇಷ ಪಾಡ್‌ಕಾಸ್ಟ್ ʼin & out’ಗಾಗಿ ವಿಶೇಷ ಸಂದರ್ಶನ ನೀಡಿದರು. ನಿರಂತರ ಪ್ರವಾಸ, ಪ್ರತಿನಿತ್ಯ ಹಲವಾರು ಕಾರ್ಯಕ್ರಮ, ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಒಂದು ಗಂಟೆ ಕಾಲ ನಮ್ಮ ಮಾತುಕೆಯಲ್ಲಿ ಭಾಗಿಯಾದರು. […]
ಕೊಡಗಿನ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್‌ಶಿಪ್‌ಗೆ ಆಯ್ಕೆ

ವಿರಾಜಪೇಟೆಯ ತೆಲುಗರ ಬೀದಿ ನಿವಾಸಿಗಳಾದ ಅಜಯ್ ಸಿಂಗ್ ಹಾಗು ವಿಭಾ ದಂಪತಿಗಳ ಮಗಳು ಹಾಗೂ ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ

ಮಡಿಕೇರಿ: ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‍ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್‍ಗಳು ಮಾಹಿತಿ ಪಡೆದಿದ್ದು, ಈ […]
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮುತ್ತಾರ್ಮುಡಿ ಗದ್ದೆಯಲ್ಲಿ ಬೇಲ್‍ರ ಕೋಯಿಮೆ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಹಾಗೂ ಕನೆಕ್ಟಿಂಗ್ ಕೊಡವಾಸ್ ಇವರ ಸಹಯೋಗದಲ್ಲಿ ಮುತ್ತಾರ್ಮುಡಿ ಗದ್ದೆಯಲ್ಲಿ ಬೇಲ್‍ರ ಕೋಯಿಮೆ ಕಾರ್ಯಕ್ರಮವು ಸೋಮವಾರ ನಡೆಯಿತು. ಮೂರ್ನಾಡು ಪಿಯು ಕಾಲೇಜು, ಜ್ಞಾನಜ್ಯೋತಿ ಕಾಲೇಜು, ಕೊಡಗು ವಿದ್ಯಾಲಯ, ಮಾರುತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬೇಲ್‍ರ ಕೋಯಿಮೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ಮಾತನಾಡಿ ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಕೃಷಿಯನ್ನೇ ನಂಬಿ ಬದುಕು ನಡೆಸುತ್ತಿದ್ದೇವೆ. ಆ ನಿಟ್ಟಿನಲ್ಲಿ […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಜುಲೈ, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ.ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್‍ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್ ರಸ್ತೆ, ಮಹದೇವ ಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್, ಅಬ್ದುಲ್ ಕಲಾಮ್ ಲೇಔಟ್ ಹಾಗೂ […]